ಶನಿವಾರ, ಮಾರ್ಚ್ 28, 2020
19 °C

ಕಾಂಗ್ರೆಸ್‌ನಿಂದ ಜ್ಯೋತಿರಾದಿತ್ಯ ಸಿಂಧಿಯಾ ಉಚ್ಚಾಟನೆ: ಬಿಜೆಪಿ ರಾಜ್ಯಸಭೆ ಟಿಕೆಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಮಧ್ಯಪ್ರದೇಶದ ಕಾಂಗ್ರೆಸ್‌ನ ಬಂಡಾಯ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರು ಮಂಗಳವಾರ ಕಾಂಗ್ರೆಸ್‌ ತೊರೆದಿದ್ದಾರೆ. 

ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಅವರು ರಾಜೀನಾಮೆ ನೀಡಿದ್ದಾರೆ. 

ಮಧ್ಯಪ್ರದೇಶದ ರಾಜ ಮನೆತನದವರಾದ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ತನ್ನತ್ತ ಸೆಳೆದಿರುವ ಬಿಜೆಪಿ, ರಾಜ್ಯಸಭೆ ಟಿಕೆಟ್‌ ನೀಡುವುದಾಗಿ ಗೊತ್ತಾಗಿದೆ. 

'ಮುಂದೆ ಸಾಗಲು ನನಗೆ ಇದು ಸೂಕ್ತ ಸಮಯ' ಎಂದು ಜ್ಯೋತಿರಾದಿತ್ಯ ಸಿಂಧಿಯಾ ಅವರು ಸೋನಿಯಾ ಗಾಂಧಿ ಅವರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಈ ಮಧ್ಯೆ ಕಾಂಗ್ರೆಸ್‌ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶಿಸಿದೆ.  

ಜ್ಯೋತಿರಾದಿತ್ಯ ಸಿಂದಿಯಾ ಅವರು ರಾಜಸ್ಥಾನದ ಬಿಜೆಪಿ ನಾಯಕಿ, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಅವರ ಸೋದರಳಿಯ (ಅಣ್ಣನ ಮಗ) 
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು