ಶುಕ್ರವಾರ, ಫೆಬ್ರವರಿ 21, 2020
31 °C

ಎಲ್‌ಐಸಿಯನ್ನು ಕೇಂದ್ರ ಸರ್ಕಾರ ಹಾಳುಮಾಡುತ್ತಿದೆ: ರಾಹುಲ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಜೀವವಿಮಾ ನಿಗಮವನ್ನು (ಎಲ್‌ಐಸಿ) ಹಾಳುಮಾಡುವ ಮೂಲಕ ಕೇಂದ್ರ ಸರ್ಕಾರ ಜನರ ಜೀವನವನ್ನು ಅಪಾಯಕ್ಕೆ ದೂಡುತ್ತಿದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಎಲ್‌ಐಸಿಯ ‘ವಸೂಲಾಗದ ಸಾಲ’ದ (ಎನ್‌ಪಿಎ) ಮೊತ್ತ ಐದು ವರ್ಷಗಳಲ್ಲಿ ದುಪ್ಪಟ್ಟಾಗಿ ₹30 ಸಾವಿರ ಕೋಟಿ ತಲುಪಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಈ ಹಿನ್ನೆಲೆಯಲ್ಲಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್, ‘ಎಲ್‌ಐಸಿಯನ್ನು ನಂಬಿ ಕೋಟ್ಯಂತರ ಜನರು ಅಲ್ಲಿ ಹೂಡಿಕೆ ಮಾಡುತ್ತಾರೆ. ಆದರೆ ಈ ನಂಬಿಕೆಯನ್ನು ಮೋದಿ ಸರ್ಕಾರ ಹಾಳುಮಾಡುತ್ತಿದೆ’ ಎಂದು ಟ್ವೀಟ್ ಮಾಡಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು