ಕಾಂಗ್ರೆಸ್‌ ಪಕ್ಷ  ತೊರೆದ ರಾಧಾಕೃಷ್ಣ ವಿಖೆ ಪಾಟೀಲ್, ಅಬ್ದುಲ್ ಸತ್ತಾರ್

ಸೋಮವಾರ, ಜೂನ್ 24, 2019
26 °C

ಕಾಂಗ್ರೆಸ್‌ ಪಕ್ಷ  ತೊರೆದ ರಾಧಾಕೃಷ್ಣ ವಿಖೆ ಪಾಟೀಲ್, ಅಬ್ದುಲ್ ಸತ್ತಾರ್

Published:
Updated:

ಮುಂಬೈ: ಮಹಾರಾಷ್ಟ್ರದ ಹಿರಿಯ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್ ಅವರು ಮಂಗಳವಾರ ಪಕ್ಷ ತೊರೆದಿದ್ದಾರೆ. ಇವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಳು ಕೇಳಿಬಂದಿದ್ದು ಕಾಂಗ್ರೆಸ್‌ನ 10 ಶಾಸಕರು  ಪಕ್ಷ ತೊರೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.  ಆದಾಗ್ಯೂ, ಶಾಸಕರು ಪಕ್ಷ ತೊರೆಯಲಿದ್ದಾರೆ ಎಂಬ ಸುದ್ದಿಯನ್ನು ಕಾಂಗ್ರೆಸ್ ತಳ್ಳಿ ಹಾಕಿದೆ.

ಒಂದು ವೇಳೆ ಕಾಂಗ್ರೆಸ್ ಪಕ್ಷದಲ್ಲಿ ಈ ರೀತಿಯ ಬೆಳವಣಿಗೆಗಳಾದರೆ ನವೆಂಬರ್ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ದೊಡ್ಡ ಹೊಡೆತ ಬೀಳಲಿದೆ.

ಕಳೆದ ತಿಂಗಳು ಪಾಟೀಲ್ ಅವರ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪಾಟೀಲ್ ಅವರ ಪುತ್ರ ಸುಜೋಯ್ ವಿಖೆ ಪಾಟೀಲ್ ಲೋಕಸಭಾ ಚುನಾವಣೆಯಲ್ಲಿ  ಅಹ್ಮದಾನಗರ್ ಚುನಾವಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು. ವಿಖೆ ಅವರು ವಿಧಾನಸಭ ಸ್ಪೀಕರ್ ಹರಿಬಾವು ಬಿಗಡೆ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಅವರ ಕಚೇರಿಯ ಅಧಿಕಾರಿಗಳು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಅದೇ ವೇಳೆ ಮೂರು ಬಾರಿ ಕಾಂಗ್ರೆಸ್ ಶಾಸಕರಾಗಿದ್ದ, ಮಾಜಿ ರಾಜ್ಯ ಖಾತೆ ಸಚಿವ ಅಬ್ದುಲ್ ಸತ್ತಾರ್ ಅವರು ಕೂಡಾ ರಾಜೀನಾಮೆ ನೀಡಿದ್ದಾರೆ.ಮಹಾರಾಷ್ಟ್ರದ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಚೌಹಾಣ್ ಅವರ ಆಪ್ತರಾಗಿದ್ದ ಸತ್ತಾರ್, ಬಿಜೆಪಿ ಸೇರುವುದಾಗಿ ಹೇಳಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 6

  Happy
 • 0

  Amused
 • 0

  Sad
 • 0

  Frustrated
 • 13

  Angry

Comments:

0 comments

Write the first review for this !