ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದುತ್ವದಿಂದ ಕಾಂಗ್ರೆಸ್‌ಗೆ ನಷ್ಟ: ಸಿಪಿಎಂ

Last Updated 13 ಡಿಸೆಂಬರ್ 2018, 18:28 IST
ಅಕ್ಷರ ಗಾತ್ರ

ನವದೆಹಲಿ: ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕಾಂಗ್ರೆಸ್‌ ಪಕ್ಷವು ಹಿಂದುತ್ವದತ್ತ ವಾಲಿದ್ದರಿಂದಲೇರಾಜಸ್ಥಾನ ಮತ್ತು ಮಧ್ಯ ಪ್ರದೇಶದಲ್ಲಿ ಬಿಜೆಪಿ ಜತೆ ನಿಕಟ ಸ್ಪರ್ಧೆ ಏರ್ಪಟ್ಟಿತು. ಇಲ್ಲದಿದ್ದರೆ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್‌ಗೆ ಭಾರಿ ಗೆಲುವು ದೊರೆಯುತ್ತಿತ್ತು ಎಂದು ಸಿಪಿಎಂ ವಿಶ್ಲೇಷಿಸಿದೆ.

ಹಿಂದುತ್ವದ ವಿಚಾರಗಳನ್ನು ಎತ್ತಿದ್ದರಿಂದ ಕಾಂಗ್ರೆಸ್‌ಗೆ ಯಾವುದೇ ಲಾಭ ಆಗಿಲ್ಲ. ಹಿಂದುತ್ವ ವಿಚಾರಗಳತ್ತ ಆಕರ್ಷಿತರಾಗುವವರು ಈ ವಿಚಾರಗಳನ್ನು ಪ್ರತಿಪಾದಿಸುವ ಮೂಲ ಪಕ್ಷಗಳಿಗೆ ಮತ ಹಾಕುತ್ತಾರೆಯೇ ಹೊರತು ನಕಲು ಮಾಡುವವರಿಗಲ್ಲ ಎಂದು ಹೇಳಿದೆ.

ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಪಡೆದ ಮತ ಪ್ರಮಾಣದಲ್ಲಿ ಹೆಚ್ಚಿನ ಅಂತರವೇನಿಲ್ಲ. ಹಾಗಾಗಿ ಸಣ್ಣ ಬದಲಾವಣೆ ಆದರೂ ಬಿಜೆಪಿ ಚೇತರಿಸಿಕೊಳ್ಳಬಹುದು ಎಂದು ಸಿಪಿಎಂ ಎಚ್ಚರಿಕೆ ನೀಡಿದೆ.

ಆರ್‌ಎಸ್‌ಎಸ್‌ ಮತ್ತು ಬಿಜೆಪಿ ತಮ್ಮ ಕೋಮುವಾದಿ ಕಾರ್ಯಸೂಚಿಯನ್ನು ಇನ್ನಷ್ಟು ತೀವ್ರವಾಗಿ ಅನುಷ್ಠಾನಗೊಳಿಸುವ ಸಾಧ್ಯತೆ ಇದೆ ಎಂದೂ ಅಭಿಪ್ರಾಯಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT