ಕಾಂಗ್ರೆಸ್‌ಗೆ ವಿರೋಧ ಪಕ್ಷ ನಾಯಕನ ಮಾನ್ಯತೆ ಕೈ ತಪ್ಪುವ ಸಾಧ್ಯತೆ

ಗುರುವಾರ , ಜೂನ್ 27, 2019
29 °C

ಕಾಂಗ್ರೆಸ್‌ಗೆ ವಿರೋಧ ಪಕ್ಷ ನಾಯಕನ ಮಾನ್ಯತೆ ಕೈ ತಪ್ಪುವ ಸಾಧ್ಯತೆ

Published:
Updated:

ನವದೆಹಲಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ 52 ಸ್ಥಾನಗಳನ್ನು ಪಡೆದಿರುವ ಕಾಂಗ್ರೆಸ್‌ಗೆ ಮತ್ತೊಮ್ಮೆ ವಿರೋಧ ಪಕ್ಷ ನಾಯಕನ ಮಾನ್ಯತೆ ಕೈ ತಪ್ಪುವ ಸಾಧ್ಯತೆಗಳಿವೆ. 

2014ರ ಲೋಕಸಭೆ ಚುನಾವಣೆಯಲ್ಲಿ 44 ಸ್ಥಾನಗಳನ್ನು ಪಡೆದಿದ್ದ ಕಾಂಗ್ರೆಸ್‌ ವಿರೋಧ ಪಕ್ಷ ನಾಯಕನ ಸ್ಥಾನ ಪಡೆಯುವಲ್ಲಿ ವಿಫಲವಾಗಿತ್ತು. ಈ ಬಾರಿಯೂ ಕಾಂಗ್ರೆಸ್‌ಗೆ 2014ರ ಪರಿಸ್ಥಿತಿಯೇ ಮರುಕಳಿಸುವ ಸಾಧ್ಯತೆಗಳಿವೆ. ಇದರಿಂದಾಗಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿ ಕೂಟಕ್ಕೆ ಪ್ರಬಲ ವಿರೋಧ ಪಕ್ಷ ಇಲ್ಲದಂತಾಗಿದೆ. 

ರಾಜಕೀಯ ಪಕ್ಷವೊಂದು ಲೋಕಸಭೆಯಲ್ಲಿ ವಿರೋಧ ಪಕ್ಷ ನಾಯಕನ ಮಾನ್ಯತೆ ಪಡೆಯಬೇಕಾದರೆ ಒಟ್ಟು ಸ್ಥಾನಗಳ ಪೈಕಿ ಶೇ 10 ರಷ್ಟು ಸ್ಥಾನಗಳನ್ನು ಗೆದ್ದಿರಬೇಕು. ಲೋಕಸಭೆ ಒಟ್ಟಾರೆ ಸದಸ್ಯರ ಸಂಖ್ಯೆ 543 ಆಗಿದ್ದು, ವಿರೋಧ ಪಕ್ಷದ ನಾಯಕನ ಮಾನ್ಯತೆ ಪಡೆಯಲು 55 ಸದಸ್ಯರ ಅಗತ್ಯವಿದೆ.

ಕಳೆದ ಲೋಕಸಭೆಯಲ್ಲಿ ಕಾಂಗ್ರೆಸ್‌ ವಿರೋಧ ಪಕ್ಷದ ನಾಯಕನ ಮಾನ್ಯತೆಗೆ ಆಗ್ರಹಿ­ಸಿತ್ತು. ಆದರೆ, ಸದನದ ಒಟ್ಟಾರೆ ಸಂಖ್ಯೆಯಲ್ಲಿ ಶೇ 10ರಷ್ಟು ಸದಸ್ಯರು ಇಲ್ಲವೆಂಬ ಕಾರಣಕ್ಕೆ ಸ್ಪೀಕರ್‌ ಎಲ್‌ಒಪಿ ಮಾನ್ಯತೆ ನೀಡಿರಲಿಲ್ಲ. 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 50

  Happy
 • 4

  Amused
 • 4

  Sad
 • 1

  Frustrated
 • 7

  Angry

Comments:

0 comments

Write the first review for this !