ಶನಿವಾರ, ಜುಲೈ 31, 2021
25 °C

ರಾಜಸ್ಥಾನ ಸರ್ಕಾರ ಅಸ್ಥಿರಗೊಳಿಸುವ ಯತ್ನ: ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು

ಪಿಟಿಐ Updated:

ಅಕ್ಷರ ಗಾತ್ರ : | |

ಜೈಪುರ: ‘ಕರ್ನಾಟಕ, ಮಧ್ಯಪ್ರದೇಶ ಹಾಗೂ ಗುಜರಾತ್‌ನಂತೆ ರಾಜಸ್ಥಾನದಲ್ಲೂ ಅಶೋಕ್‌ ಗೆಹ್ಲೋಟ್‌ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಡೆಯುತ್ತಿದೆ’ ಎಂದು ರಾಜಸ್ಥಾನ ವಿಧಾನಸಭೆಯ ಮುಖ್ಯ ಸಚೇತಕ ಮಹೇಶ್‌ ಜೋಶಿ  ಬುಧವಾರ ಆರೋಪಿಸಿದ್ದಾರೆ.

ಈ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ದೂರು ನೀಡಿರುವ ಅವರು, ‘ನಮ್ಮ ಪಕ್ಷದ ಶಾಸಕರು ಹಾಗೂ ನಮಗೆ ಬೆಂಬಲ ನೀಡಿರುವ, ಪಕ್ಷೇತರ ಶಾಸಕರಿಗೆ ಆಮಿಷ ಒಡ್ಡಲಾಗುತ್ತಿದೆ. ಇಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಬಿಜೆಪಿಯ ಹೆಸರನ್ನು ಉಲ್ಲೇಖಿಸದೆ ಒತ್ತಾಯಿಸಿದ್ದಾರೆ.

ಜೂನ್‌ 19ರಂದು ರಾಜ್ಯಸಭಾ ಚುನಾವಣೆ ನಡೆಯಲಿದ್ದು, ಆ ಕಾರಣಕ್ಕಾಗಿಯೇ ಹಟಾತ್ತನೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ ಎನ್ನಲಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು