‘ಕಾಂಗ್ರೆಸ್‌ಗೆ ಮಮತಾ ಬೆಂಬಲ ಬೇಕಿಲ್ಲ’

ಗುರುವಾರ , ಮೇ 23, 2019
27 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

‘ಕಾಂಗ್ರೆಸ್‌ಗೆ ಮಮತಾ ಬೆಂಬಲ ಬೇಕಿಲ್ಲ’

Published:
Updated:
Prajavani

ಕೋಲ್ಕತ್ತ: ಕೇಂದ್ರದಲ್ಲಿ ಸರ್ಕಾರ ರಚಿಸಲು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ನೆರವು ಪಡೆಯುವುದಿಲ್ಲ, ಹಾಗೆಯೇ ಅವರು ಪ್ರಧಾನಿಯಾಗಲು ಬೆಂಬಲವನ್ನೂ ನೀಡುವುದಿಲ್ಲ ಎಂದು ಪಶ್ಚಿಮ ಬಂಗಾಳ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಸೋಮೇನ್‌ ಮಿತ್ರಾ ಹೇಳಿದ್ದಾರೆ. 

ಮಮತಾ ಅವರ ಟಿಎಂಸಿ, ಬಿಜೆಪಿ–ಆರ್‌ಎಸ್ಎಸ್‌ನ ‘ಅತ್ಯಂತ ದೊಡ್ಡ ಮತ್ತು ಅತಿ ವಿಶ್ವಾಸಾರ್ಹ ಮಿತ್ರಪಕ್ಷ’ ಎಂದು ಮಿತ್ರಾ ಆರೋಪಿಸಿದ್ದಾರೆ. ಚುನಾವಣೆಯ ಬಳಿಕ ಅಗತ್ಯ ಬಿದ್ದರೆ ಬಿಜೆಪಿಗೆ ನೆರವು ನೀಡುವುದಕ್ಕಾಗಿ ಮಮತಾ ಅವರು ಎಲ್ಲ ಆಯ್ಕೆಗಳನ್ನೂ ಮುಕ್ತವಾಗಿರಿಸಿಕೊಂಡಿದ್ದಾರೆ ಎಂದಿದ್ದಾರೆ. 

ತಮ್ಮ ಬೆಂಬಲ ಇಲ್ಲದೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವು ಸರ್ಕಾರ ರಚಿಸುವುದು ಸಾಧ್ಯವಿಲ್ಲ ಎಂದು ಮಮತಾ ಅವರು ಹೇಳುತ್ತಲೇ ಇದ್ದಾರೆ. ಮಮತಾ ಅವರು ವಿರೋಧ ಪಕ್ಷಗಳ ಸಮಾವೇಶವೊಂದನ್ನು ಕೋಲ್ಕತ್ತದಲ್ಲಿ ಜನವರಿಯಲ್ಲಿ ಆಯೋಜಿಸಿದ್ದರು. ಅದರಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಭಾಗವಹಿಸಿರಲಿಲ್ಲ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !