ಗುರುವಾರ , ಸೆಪ್ಟೆಂಬರ್ 23, 2021
25 °C

ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಇಂದೋರ್: ಕಾಂಗ್ರೆಸ್ ಪಕ್ಷ ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ, ಇದು ಮೌಲಾನಾ ಆಜಾದ್ ಹಾಗೂ ಮಹಾತ್ಮ ಗಾಂಧಿ ಹುಟ್ಟು ಹಾಕಿದ ಪಕ್ಷ ಎಂದು ಪಂಜಾಬ್ ಮಂತ್ರಿ ಹಾಗೂ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.

ಶುಕ್ರವಾರ ಮಧ್ಯಪ್ರದೇಶದ ಇಂದೋರ್‌‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಇಂತಹ ಮಹಾತ್ಮರು ಹೋರಾಟ ನಡೆಸಿ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಈಗ ನೀವು ಇಲ್ಲಿರುವ ಈಗಿನ ಇಂಗ್ಲೀಷರನ್ನು ಹೊರಹಾಕಬೇಕಿದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ಇಂದೋರ್ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಪಂಕಜ್ ಸಾಂಗ್ವಿ ಸ್ಪರ್ಧಿಸಿದ್ದಾರೆ. ಬಿಜೆಪಿ ಪಕ್ಷದಿಂದ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಪ್ರತಿನಿಧಿಸುತ್ತಿದ್ದರು.  ಸುಮಿತ್ರಾ ಮಹಾಜನ್ ಬದಲಿಗೆ ಶಂಕರ್ ಲಲ್ವಾನಿ ಎಂಬುವರಿಗೆ ಟಿಕೆಟ್ ನೀಡಲಾಗಿದೆ. 1989ರಿಂದ ಈ ಕ್ಷೇತ್ರದಲ್ಲಿ ಸ್ಪರ್ಧಿಸಿ ಹಿಡಿತ ಸಾಧಿಸಿದ್ದ ಸುಮಿತ್ರಾ ಮಹಾಜನ್ ಅವರಿಗೆ ಟಿಕೆಟ್ ನಿರಾಕರಿಸಿ ಶಂಕರ್ ಅವರಿಗೆ ಅವಕಾಶ ನೀಡಲಾಗಿದೆ. ಶಂಕರ್ ಲಲ್ವಾನಿ ಇಂದೋರ್ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದರು, ಇಂದೋರ್ ನಗರಸಭಾ ಅಧ್ಯಕ್ಷರಾಗಿಯೂ ಇವರು ಸೇವೆ ಸಲ್ಲಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು