ಶುಕ್ರವಾರ, ಏಪ್ರಿಲ್ 23, 2021
28 °C

ರಾಹುಲ್‌ ಅಧ್ಯಕ್ಷ ಸ್ಥಾನ ರಾಜೀನಾಮೆ ಪ್ರಸ್ತಾಪ ತಿರಸ್ಕರಿಸಿದ್ದೇವೆ: ಕಾಂಗ್ರೆಸ್‌

ಏಜನ್ಸೀಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಅವರ ರಾಜೀನಾಮೆ ಪ್ರಸ್ತಾಪವನ್ನು ನಾವು ತಿರಸ್ಕರಿಸಿದ್ದೇವೆ ಎಂದು ಪಕ್ಷದ ವಕ್ತಾರ ರಣದೀಪ್‌ ಸಿಂಗ್‌ ಸುರ್ಜೆವಾಲ ಸ್ಪಷ್ಟಪಡಿಸಿದರು.

ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಸೋಲಿನ ಬಗ್ಗೆ ಪರಾಮರ್ಶೆ ನಡೆಸಲು ಇಲ್ಲಿ ಶನಿವಾರ ನಡೆದ ಸಿಡಬ್ಲ್ಯುಸಿ ಸಭೆಯ ಬಳಿಕ ಸುರ್ಜೆವಾಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಹುಲ್‌ ಗಾಂಧಿ ನಮ್ಮ ನಾಯಕರಾಗಿಯೇ ಇರಲಿದ್ದಾರೆ ಎಂದು ಹೇಳಿದರು.

‘ಪಕ್ಷದ ಅಧ್ಯಕ್ಷ ಸ್ಥಾನ ನೆಹರೂ ಕುಟುಂಬದ ಹೊರತಾಗಿರಬೇಕು. ಅಧ್ಯಕ್ಷ ಸ್ಥಾನಕ್ಕೆ ಪ್ರಿಯಾಂಕಾ ಗಾಂಧಿ ಅವರ ಹೆಸರೂ ಪ್ರಸ್ತಾಪ ಬೇಡ’ ಎಂದು ಸಭೆಯಲ್ಲಿ ಅಧ್ಯಕ್ಷ ರಾಹುಲ್‌ ಗಾಂಧಿ ಇಂಗಿತ ವ್ಯಕ್ತಪಡಿದರು. ಆದರೆ, ಅವರ ಅಭಿಪ್ರಾಯವನ್ನು ಸಭೆಯಲ್ಲಿದ್ದ ನಾಯಕರು ಸರ್ವಾನುಮತದಿಂದ ತಿರಸ್ಕರಿಸಿದ್ದೇವೆ ಎಂದು ಹೇಳಿದರು.

ಪಕ್ಷಕ್ಕೆ ರಾಹುಲ್‌ ಗಾಂಧಿ ಅವರ ಅನಿವಾರ್ಯತೆ ಮತ್ತು ಮಾರ್ಗದರ್ಶನದ ಅಗತ್ಯ ಇದೆ. ಅವರು ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ. ಪಕ್ಷ ಸಂಘಟನೆಗೆ ರಾಹುಲ್‌ಗೆ ಹೆಚ್ಚಿನ ಅಧಿಕಾರ ನೀಡಲು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಸಭೆಯಲ್ಲಿ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ ಸಿಂಗ್, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಇತರ ಮುಖಂಡರು ಇದ್ದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು