ಗುರುವಾರ , ಮಾರ್ಚ್ 4, 2021
22 °C

ಕಾಂಗ್ರೆಸ್ ಪ್ರತಿನಿಧಿಗಳು 1 ತಿಂಗಳವರೆಗೆ ಟಿ.ವಿ ಚರ್ಚೆಗಳಲ್ಲಿ ಭಾಗವಹಿಸುವಂತಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕಾಂಗ್ರೆಸ್ ಜನಪ್ರತಿನಿಧಿಗಳು ಒಂದು ತಿಂಗಳವರೆಗೆ ಯಾವುದೇ ಸುದ್ದಿವಾಹಿನಿಗಳಲ್ಲಿ  ಭಾಗವಹಿಸುವುದು ಬೇಡ ಎಂದು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ. ಅದೇ ವೇಳೆ ಕಾಂಗ್ರೆಸ್ ಪ್ರತಿನಿಧಿಗಳನ್ನು ಯಾವುದೇ ಕಾರ್ಯಕ್ರಮಗಳಿಗೆ ಆಹ್ವಾನಿಸಬೇಡಿ ಎಂದು ಸುರ್ಜೇವಾಲಾ ಸುದ್ದಿಮಾಧ್ಯಮಗಳಿಗೆ ಹೇಳಿದ್ದಾರೆ.

ಒಂದು ತಿಂಗಳವರೆಗೆ ಸುದ್ದಿವಾಹಿನಿಗಳ ಚರ್ಚೆಯಲ್ಲಿ ಭಾಗವಹಿಸಲು ಕಾಂಗ್ರೆಸ್  ಪ್ರತಿನಿಧಿಗಳನ್ನು ಕಳಿಸುವುದಿಲ್ಲ ಎಂದು ಪಕ್ಷ ತೀರ್ಮಾನಿಸಿದೆ. ಎಲ್ಲ ಸುದ್ದಿವಾಹಿನಿಗಳು/ಸಂಪಾದಕರು  ಚರ್ಚೆಗಾಗಿ ಕಾಂಗ್ರೆಸ್ ಜನ ಪ್ರತಿನಿಧಿಗಳನ್ನು ಕರೆಯಬೇಡಿ ಎಂದು ಮನವಿ ಮಾಡುತ್ತಿದ್ದೇವೆ ಎಂದು ಕಾಂಗ್ರೆಸ್ ಪಕ್ಷ ತಮ್ಮ ಪ್ರಕಟಣೆಯಲ್ಲಿ ತಿಳಿಸಿದೆ.

ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿಯುತ್ತಾರಾ ಇಲ್ಲವಾ ಎಂಬುದರ ಬಗ್ಗೆ ಅನಿಶ್ಚಿತತೆ ಇದ್ದು, ಈ ಹೊತ್ತಲ್ಲೇ ಕಾಂಗ್ರೆಸ್ ಜನಪ್ರತಿನಿಧಿಗಳು ಸುದ್ದಿವಾಹಿನಿಗಳ ಚರ್ಚೆಯಲ್ಲಿ ಭಾಗವಹಿಸದಂತೆ ಕಾಂಗ್ರೆಸ್ ನಿರ್ಬಂಧ ಹೇರಿದೆ.
 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು