7

ಕಾಶ್ಮೀರದಲ್ಲಿ ಕಾಂಗ್ರೆಸ್‌–ಪಿಡಿಪಿ ಮೈತ್ರಿ?

Published:
Updated:

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಉದ್ಭವಿಸಿರುವ ಅತಂತ್ರ ರಾಜಕೀಯ ಪರಿಸ್ಥಿತಿ ಕುರಿತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ ನಿವಾಸದಲ್ಲಿ ಸೋಮವಾರ ಸಭೆ ನಡೆದಿದೆ. ಪಿ.ಚಿದಂಬರಂ, ಕರಣ್‌ ಸಿಂಗ್‌, ಅಂಬಿಕಾ ಸೋನಿ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಈ ಸಭೆಯಲ್ಲಿ ಭಾಗವಹಿಸಿದ್ದರು.

ಬಿಜೆಪಿ–ಪಿಡಿಪಿ ಮೈತ್ರಿ ಸರ್ಕಾರ ಮುರಿದುಬಿದ್ದ ನಂತರ ನಡೆದ ಕಾಂಗ್ರೆಸ್‌ ನಾಯಕರ ಈ ಸಭೆ ಕಣಿವೆ ರಾಜ್ಯದಲ್ಲಿ ಹೊಸ ರಾಜಕೀಯ ಸಾಧ್ಯತೆಗಳ ಬಗ್ಗೆ ನಿರೀಕ್ಷೆಗಳನ್ನು ಹುಟ್ಟು ಹಾಕಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಪಕ್ಷದ ಮುಂದಿನ ರಾಜಕೀಯ ನಡೆಯ ಬಗ್ಗೆ ಚರ್ಚಿಸಲು ನೂರಕ್ಕೂ ಹೆಚ್ಚು ನಾಯಕರ ಸಭೆಯನ್ನು ಮಂಗಳವಾರ ಶ್ರೀನಗರದಲ್ಲಿ ಕರೆಯಲಾಗಿದೆ.

ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಶುಕ್ರವಾರದಿಂದ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಆದರೆ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ಮೆಹಬೂಬಾ ಭೇಟಿ ಇನ್ನೂ ಸಾಧ್ಯವಾಗಿಲ್ಲ.

ಪಿಡಿಪಿಯ ಜತೆಗೆ ಹೊಂದಾಣಿಕೆಗೆ ಕಾಂಗ್ರೆಸ್‌ ಸಿದ್ಧವಾಗಿದೆ ಎಂಬುದನ್ನು ಜಮ್ಮು ಮತ್ತು ಕಾಶ್ಮೀರದ ಉಸ್ತುವಾರಿ ಹೊಂದಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಂಬಿಕಾ ಸೋನಿ ಅಲ್ಲಗಳೆದಿದ್ದಾರೆ. ರಾಜ್ಯದಲ್ಲಿ ಶೀಘ್ರವೇ ಚುನಾವಣೆ ನಡೆಯಲಿದೆ. ಈ ಹಂತದಲ್ಲಿ ಮತ್ತೊಂದು ಮೈತ್ರಿಕೂಟ ರಚನೆಗೆ ಕಾಂಗ್ರೆಸ್‌ ಮುಂದಾಗುವುದಿಲ್ಲ ಎಂದು ಈಗಾಗಲೇ ಕಾಂಗ್ರೆಸ್‌ ಸ್ಪಷ್ಟಪಡಿಸಿದೆ ಎಂದು ಅವರು ತಿಳಿಸಿದ್ದಾರೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !