2019ರ ಚುನಾವಣೆಗೆ ರಾಹುಲ್‌ ಗಾಂಧಿ ಕಾಂಗ್ರೆಸ್‌ನ ಪ್ರಧಾನಿ ಅಭ್ಯರ್ಥಿ 

7

2019ರ ಚುನಾವಣೆಗೆ ರಾಹುಲ್‌ ಗಾಂಧಿ ಕಾಂಗ್ರೆಸ್‌ನ ಪ್ರಧಾನಿ ಅಭ್ಯರ್ಥಿ 

Published:
Updated:

ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗೆ ಇಳಿಸುವುದಕ್ಕಾಗಿ ಮೈತ್ರಿಕೂಟ ರಚಿಸುವ ಹೊಣೆಯನ್ನು ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ನೀಡಿರುವ ಕಾಂಗ್ರೆಸ್‌, ರಾಹುಲ್‌ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂಬ ಸಂಗತಿಯನ್ನೂ ಹೊರಹಾಕಿದೆ.

ರಾಹುಲ್‌ ಗಾಂದಿ ಪಕ್ಷದ ಅಧ್ಯಕ್ಷರಾದ ಮೇಲೆ ಭಾನುವಾರ ನಡೆದ ಮೊದಲ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 

ವಿಸ್ತೃತ ಸಿಡಬ್ಲ್ಯುಸಿ ಸಭೆಯಲ್ಲಿ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಹಾಗೂ ಕಾಂಗ್ರೆಸ್ನ ಶಾಸಕಾಂಗ ಪಕ್ಷದ ನಾಯಕರು ಸೇರಿದಂತೆ 200ಕ್ಕೂ ಹೆಚ್ಚು ಮುಖಂಡರು ಭಾಗವಹಿಸಿದ್ದರು. ಐದು ತಾಸು ನಡೆದೆ ಸುದೀರ್ಘ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪ್ರಚಾರದ ನೇತೃತ್ವವನ್ನು ರಾಹುಲ್‌ ಅವರೇ ವಹಿಸಬೇಕು ಎಂದೂ ಸಭೆಯಲ್ಲಿ ನಿರ್ಧರಿಸಲಾಗಿದೆ. 

ಸಭೆಯಲ್ಲಿ ಪಕ್ಷದ ನಾಯಕರಿಗೆ ಎಚ್ಚರಿಕೆಯನ್ನೂ ನೀಡಿರುವ ರಾಹುಲ್‌ ಗಾಂಧಿ, ಸಾರ್ವಜನಿಕವಾಗಿ ‘ಅ‍ಪ್ರಸ್ತುತ’ ಹೇಳಿಕೆಗಳನ್ನು ನೀಡಬಾರದು. ಅದು ಪಕ್ಷದ ರಾಜಕೀಯ ನಿರೀಕ್ಷೆಗಳನ್ನು ಹಾಳುಮಾಡುತ್ತದೆ ಮತ್ತು ಪಕ್ಷದ ಭವಿಷ್ಯವನ್ನು ಹಾನಿಗೊಳಿಸುತ್ತದೆ’ ಎಂದು ಹೇಳಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಧಿಕಾರದಿಂದ ದೂರವಾಗುವ ಕ್ಷಣಗಳು ಆರಂಭವಾಗಿದೆ. ಪ್ರಜಾಪ್ರಭುತ್ವದ ಮೌಲ್ಯಗಳೊಂದಿಗೆ ರಾಜಿ ಮಾಡಿಕೊಳ್ಳುತ್ತಿರುವ ‘ಅಪಾಯಕಾರಿ ಆಡಳಿತ’ದಿಂದ ದೇಶದ ಜನರನ್ನು ರಕ್ಷಿಸಬೇಕಿದೆ' ಎಂದು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

‘ನಾವು ಮೈತ್ರಿ ಕೆಲಸಗಳನ್ನು ಮಾಡಲು ಬದ್ಧರಾಗಿದ್ದೇವೆ ಮತ್ತು ಈ ಪ್ರಯತ್ನದಲ್ಲಿ ನಾವೆಲ್ಲರೂ ಅವರೊಂದಿಗೆ(ರಾಹುಲ್‌ ಗಾಂಧಿ) ಇದ್ದೇವೆ’ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಮೈತ್ರಿಯ ಮೂಲಕ ಮತ್ತೆ ಮುಂಚೂಣಿಗೆ ಬರಬೇಕು ಎಂದು ಹವಣಿಸುತ್ತಿರುವ ಅಂಶವನ್ನು ಮತ್ತಷ್ಟು ಗಟ್ಟಿಗೊಳಿಸಿದ್ದಾರೆ. 

* ಇದನ್ನೂ ಓದಿ...

ಮೈತ್ರಿ ಕಟ್ಟುವ ಹೊಣೆ ರಾಹುಲ್‌ಗೆ​

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 1

  Sad
 • 0

  Frustrated
 • 4

  Angry

Comments:

0 comments

Write the first review for this !