ಬುಧವಾರ, ಜೂಲೈ 8, 2020
25 °C

ರಾಷ್ಟ್ರಪತಿ ಆಳ್ವಿಕೆ ಕುರಿತು ಬಿಜೆಪಿ ವದಂತಿ ಹಬ್ಬಿಸುತ್ತಿದೆ: ಕಾಂಗ್ರೆಸ್ ಕಿಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಮುಂಬೈ: ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರುವ ಕುರಿತು ವದಂತಿಗಳನ್ನು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಬ್ಬಿಸುತ್ತಿದೆ ಎಂದು ಆರೋಪಿಸಿರುವ ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್ ಘಟಕದ ಮುಖ್ಯಸ್ಥ ಮತ್ತು ಕಂದಾಯ ಸಚಿವ ಬಾಳಾಸಾಹೇಬ್ ಥೋರಟ್, ಸರ್ಕಾರ ಪ್ರಬಲವಾಗಿದೆ ಮತ್ತು ಮೂರು ಪಕ್ಷಗಳು ಒಗ್ಗಟ್ಟಾಗಿವೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ವದಂತಿಗಳನ್ನು ಹಬ್ಬಿಸಿದ್ದಕ್ಕಾಗಿ ರಾಜ್ಯದ ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಪ್ರತಿವಾರವು ಕಾಂಗ್ರೆಸ್, ಶಿವಸೇನಾ ಮತ್ತು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ)ಯೊಂದಿಗೆ ಸಭೆ ನಡೆಸುತ್ತದೆ. ನಾವೆಲ್ಲರೂ ಒಂದಾಗಿದ್ದೇವೆ ಮತ್ತು ಅಬಿವೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲು ಯಾವುದೇ ಕಾರಣಗಳಿಲ್ಲ. ನಮ್ಮ ಸರ್ಕಾರವು ಪ್ರಬಲವಾಗಿದೆ. ಬಿಜೆಪಿ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದಾರೆ ಎಂದರೆ ಅದರರ್ಥ ರಾಷ್ಟ್ರಪತಿ ಆಡಳಿತ ಜಾರಿಗೆ ಬರಲಿದೆ ಎಂದಲ್ಲ. ಬಿಜೆಪಿಗೆ ಅಧಿಕಾರದ ಹಸಿವಿದೆ ಎಂದು ದೂರಿದ್ದಾರೆ.

ಮುಂಜಾನೆ ಶಿವಸೇನೆ ಸಂಸದ ಸಂಜಯ್ ರಾವುತ್ ಕೂಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ ಸರ್ಕಾರವು ಪ್ರಬಲವಾಗಿದೆ ಮತ್ತು ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಸಂಬಂಧಿಸಿದ ಯಾವುದೇ ಸಲಹೆಗಳನ್ನು ತಿರಸ್ಕರಿಸಿದೆ ಎಂದು ಹೇಳಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು