ಸೋಮವಾರ, ಫೆಬ್ರವರಿ 24, 2020
19 °C

ತೆಲಂಗಾಣದಲ್ಲೂ ಮಹಾಮೈತ್ರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ತೆಲಂಗಾಣ ರಾಷ್ಟ್ರ ಸಮಿತಿಯನ್ನು (ಟಿಆರ್‌ಎಸ್‌) ಎದುರಿಸಲು ಕಾಂಗ್ರೆಸ್, ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಸಿಪಿಐಗಳು ಮಹಾಮೈತ್ರಿ ರಚಿಸಿಕೊಂಡಿವೆ.

ತೆಲಂಗಾಣ ಟಿಡಿಪಿ ಆದ್ಯಕ್ಷ ಎಲ್.ರಮಣ, ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕ್ಯಾಪ್ಟನ್ ಎನ್.ಉತ್ತಮ ಕುಮಾರ್ ರೆಡ್ಡಿ ಮತ್ತು ಸಿಪಿಐ ರಾಜ್ಯ ಕಾರ್ಯದರ್ಶಿ ಸಿ.ವೆಂಕಟ ರೆಡ್ಡಿ ಬುಧವಾರ ಸಂಜೆ ಇಲ್ಲಿನ ಹೋಟೆಲ್ ಒಂದರಲ್ಲಿ ಸಭೆ ನಡೆಸಿದ್ದಾರೆ.

ಟಿಆರ್‌ಎಸ್‌ ಮತ್ತು ಕೆ.ಚಂದ್ರಶೇಖರ್ ರಾವ್ ಮತ್ತೆ ಅಧಿಕಾರಕ್ಕೆ ಬರದಂತೆ ತಡೆಯುವ ಉದ್ದೇಶದಿಂದ ಈ ಪಕ್ಷಗಳು ಮಹಾಮೈತ್ರಿ ಮಾಡಿಕೊಂಡಿವೆ. ಕಾಂಗ್ರೆಸ್ ಜತೆಗೆ ಭಿನ್ನಾಭಿಪ್ರಾಯ ಹೊಂದಿರುವ ಸಿಪಿಎಂ ಅನ್ನೂ ಮಹಾಮೈತ್ರಿಗೆ ಸೇರಿಸಿಕೊಳ್ಳುವ ಸಂಬಂಧ ಮೂವರು ನಾಯಕರೂ ಚರ್ಚೆ ನಡೆಸಿದ್ದಾರೆ. ಆದರೆ ಸೀಟು ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು