ಶನಿವಾರ, ಏಪ್ರಿಲ್ 4, 2020
19 °C

ಅಮಿತ್‌ ಶಾ ರಾಜೀನಾಮೆಗೆ ಪಟ್ಟು: ಕಾಂಗ್ರೆಸ್‌, ಟಿಎಂಸಿ, ಎಎಪಿ ಪ್ರತಿಭಟನೆ

ಏಜನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಸಂಸತ್‌ ಕಲಾಪ ಆರಂಭಕ್ಕೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿದೆ. 

ರಾಹುಲ್ ಗಾಂಧಿ, ಶಶಿ ತರೂರ್‌ ಮತ್ತು ಅಧಿರಂಜನ್‌ ಚೌಧರಿ ಸೇರಿದಂತೆ ಕಾಂಗ್ರೆಸ್‌ನ ಸಂಸದರು ಸಂಸತ್‌ ಭವನದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ್ದಾರೆ. 

ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರವನ್ನು ತಡೆಗಟ್ಟಲು ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿಫಲರಾಗಿದ್ದಾರೆ. ಕಾರಣ, ಅವರು ಈ ಕೂಡಲೇ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್‌ ಒತ್ತಾಯಿಸಿದೆ. 

ದೆಹಲಿ ಗಲಭೆ ವಿಚಾರವಾಗಿ ಟಿಎಂಸಿ ಮತ್ತು ಎಎಪಿ ಸಂಸದರು ಕೇಂದ್ರ‌ ಸರ್ಕಾರದ ವಿರುದ್ಧ ಸಂಸತ್‌ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಎರಡನೇ ಹಂತದ ಅಧಿವೇಶನ ಇಂದು ಆರಂಭವಾಗಿದ್ದು, ಸಂಸತ್‌ನ ಉಭಯ ಸದನಗಳಲ್ಲಿ ವಿಪಕ್ಷಗಳು ದೆಹಲಿ ಹಿಂಸಾಚಾರ ಕುರಿತು ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಳ್ಳಲಿವೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು