ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂತನ ಅಧ್ಯಕ್ಷರ ಆಯ್ಕೆಗೆ ಇದೇ 10ರಂದು ಕಾಂಗ್ರೆಸ್ ಸಭೆ

Last Updated 4 ಆಗಸ್ಟ್ 2019, 10:26 IST
ಅಕ್ಷರ ಗಾತ್ರ

ನವದೆಹಲಿ:ಪಕ್ಷದ ನೂತನ ಅಧ್ಯಕ್ಷರ ಆಯ್ಕೆಗೆ ಇದೇ 10ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಸಲಿದೆ.

‘ಆಗಸ್ಟ್ 10ರಂದು ಬೆಳಿಗ್ಗೆ 11 ಗಂಟೆಗೆಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಕಚೇರಿಯಲ್ಲಿ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಯ ಮುಂದಿನ ಸಭೆ ನಡೆಸಲು ನಿರ್ಧರಿಸಲಾಗಿದೆ’ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ.

ಲೋಕಸಭೆ ಚುನಾವಣೆ ಸೋಲಿನ ಬಳಿಕ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದಾರೆ.

ರಾಹುಲ್‌ ಗಾಂಧಿ ಅವರ ಉತ್ತರಾಧಿಕಾರಿ ಯಾರಾಗಬೇಕು ಎಂಬ ವಿಚಾರದಲ್ಲಿ ಪಕ್ಷದ ವಲಯಗಳಲ್ಲಿ ಅನೌಪಚಾರಿಕ ಚರ್ಚೆಗಳು ನಡೆಯುತ್ತಿವೆ. ಹಿರಿಯರಿಗೆ ಈ ಸ್ಥಾನ ಕೊಡಬೇಕು ಎಂಬ ನಿಲುವನ್ನು ಕೆಲವು ಗುಂಪುಗಳು ಹೊಂದಿದ್ದರೆ ಯುವಕರಿಗೆ ಆದ್ಯತೆ ನೀಡಬೇಕು ಎಂಬುದು ಮತ್ತೆ ಕೆಲವು ಗುಂಪುಗಳ ವಾದವಾಗಿದೆ.

ಮಲ್ಲಿಕಾರ್ಜುನ ಖರ್ಗೆ, ಸುಶೀಲ್‌ ಕುಮಾರ್‌ ಶಿಂಧೆ, ಮುಕುಲ್‌ ವಾಸ್ನಿಕ್‌, ಜ್ಯೋತಿರಾದಿತ್ಯ ಸಿಂಧಿಯಾ, ಸಚಿನ್‌ ಪೈಲಟ್‌ ಮುಂತಾದವರ ಹೆಸರುಗಳು ಕೇಳಿ ಬರುತ್ತಿವೆ. ರಾಹುಲ್‌ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಅವರಿಗೆ ಅಧ್ಯಕ್ಷ ಹುದ್ದೆ ನೀಡಬೇಕು ಎಂದು ಒಂದು ವರ್ಗ ಪ್ರತಿಪಾದಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT