ಸೋಮವಾರ, ಫೆಬ್ರವರಿ 24, 2020
19 °C

ಹುತಾತ್ಮರಿಗೆ ಶ್ರದ್ಧಾಂಜಲಿ: ಕಾಂಗ್ರೆಸ್ ನಾಯಕನನ್ನು ಸ್ವಾಗತಿಸಲು ನೋಟು ಎಸೆದರು!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಪುಲ್ವಾಮ ಉಗ್ರ ದಾಳಿಯಲ್ಲಿ ಮಡಿದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮದಲ್ಲಿ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರ ಪುತ್ರ ವಿರೇಂದ್ರ ರಾವತ್ ಅವರ ಮೈ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ನೋಟು ಎಸೆಯುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ವಿರೇಂದ್ರ ರಾವತ್  ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ಪಕ್ಷದ ಕಾರ್ಯಕರ್ತರು ಅವರ ಮೇಲೆ ನೋಟುಗಳನ್ನ ಎಸೆಯುತ್ತಿದ್ದಾರೆ. ಇತ್ತ  ಇಬ್ಬರು ಗಾಯಕರು ಭಜನೆ ಹಾಡುತ್ತಿರುವುದು ವಿಡಿಯೊದಲ್ಲಿದೆ. ಉತ್ತರಾಖಂಡದ ರೂರ್ಕಿಯಲ್ಲಿ ಆ ಘಟನೆ ನಡೆದಿದೆ.

ಇತ್ತೀಚೆಗೆ ಹುತಾತ್ಮಯೋಧನ ಅಂತಿಮ ಯಾತ್ರೆ ವೇಳೆ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ನಗುತ್ತಾ ಕೈ ಬೀಸಿದ್ದು ಟೀಕೆಗೊಳಗಾಗಿತ್ತು. ಕೇರಳದಲ್ಲಿ ಹುತಾತ್ಮ ಯೋಧನ ಪಾರ್ಥೀವ ಶರೀರದ ಮುಂದೆ ನಿಂತು ಸೆಲ್ಫಿ ಕ್ಲಿಕ್ಕಿಸಿದ್ದೂ ವಿವಾದವಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು