ಭಾನುವಾರ, ಜುಲೈ 25, 2021
22 °C

ರಾಮಮಂದಿರ ನಿರ್ಮಾಣ: ವಿಎಚ್‌ಪಿ ಮಾದರಿಗೆ ಆಕ್ಷೇಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಸಂಬಂಧ ವಿಶ್ವ ಹಿಂದೂ ಪರಿಷತ್ ರೂಪಿಸಿರುವ ಮಾದರಿಗೆ ರಾಮಜನ್ಮ ಭೂಮಿ ಟ್ರಸ್ಟ್‌ ಸದಸ್ಯರು ಆಕ್ಷೇಪ ವ್ಯಕ್ತವಾಗಿದೆ. 

ದಿಗಂಬರ ಅಖಾಡ ಮುಖ್ಯಸ್ಥ ಮಹಂತ್‌ ಸುರೇಶ್‌ ದಾಸ್‌, ಬಿಜೆಪಿ ಮಾಜಿ ಸಂಸದ ರಾಮ್‌ ವಿಲಾಸ್‌ ವೇದಾಂತಿ ಮೊದಲಾದವರು ಈ ಸಂಬಂಧ ಸಭೆ ನಡೆಸಿ ವಿರೋಧ ವ್ಯಕ್ತಪಡಿಸಿದ್ದಾರೆ. 

‘ವಿಎಚ್‌ಪಿ ಪ್ರಸ್ತಾವಿಸಿರುವ ಮಂದಿ ರದ ಮಾದರಿಯು ಹಳೆಯದಾಗಿದ್ದು, ಅದರಲ್ಲಿ ಅಗತ್ಯ  ಬದಲಾವಣೆ ತರಬೇಕಿದೆ. ವೈಭವಯುತ ಮಂದಿರ ನಿರ್ಮಾಣ ಮಾಡಬೇಕು. ಇದಕ್ಕಾಗಿ ಸಂಪನ್ಮೂಲಗಳ ಕೊರತೆ ಇಲ್ಲ ಎಂದು ಹೇಳಿದ್ದಾರೆ. 

ರಾಮಮಂದಿರ ನಿರ್ಮಾಣ ಚಳವಳಿಯಲ್ಲಿ ಭಾಗವಹಿಸಿದ್ದವರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದ್ದಾರೆ. 

ಸ್ಥಳೀಯ ಬಿಜೆಪಿ ಶಾಸಕ ವೇದ ಪ್ರಕಾಶ್‌ ಗುಪ್ತ ಅವರನ್ನು ಭೇಟಿ ಮಾಡಿ, ಮನವಿ ಪತ್ರ ಸಲ್ಲಿಸಿದ್ದಾರೆ. ಈ ಮನವಿ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೂ ಕಳುಹಿಸುವುದಾಗಿ ಹೇಳಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು