ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ ಬಂಧನ

7

ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ ಬಂಧನ

Published:
Updated:

ಅಹಮದಾಬಾದ್‌: ಗುಜರಾತ್‌ನ ಮಾಜಿ ಐಪಿಎಸ್‌ ಅಧಿಕಾರಿ ಸಂಜೀವ್‌ ಭಟ್‌ ಅವರನ್ನು ಸಿಐಡಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. 

1998ರಲ್ಲಿ ಸಂಜೀವ್ ಭಟ್‌ ಡಿಸಿಪಿಯಾಗಿ ಕೆಲಸ ಮಾಡುವಾಗ ವಕೀಲರೊಬ್ಬರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಬಂಧಿಸಿದ್ದರು. ಅವರ ಮೇಲೆ ನಕಲಿ ಮಾದಕವಸ್ತು ಮಾರಾಟ ಪ್ರಕರಣ ದಾಖಲಿಸಿದ್ದರು. 

ಈ ಪ್ರಕರಣದ ವಿಚಾರಣೆ ಗುಜರಾತ್ ಹೈಕೋರ್ಟ್‌ನಲ್ಲಿ ನಡೆಯುತ್ತಿದೆ. 

ಗುಜರಾತ್‌ ಸಿಐಡಿ ಪೊಲೀಸರು ಸಂಜೀವ್‌ ಭಟ್‌ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. 

2015ರಲ್ಲಿ ಸಂಜೀವ್ ಭಟ್‌ ಅವರನ್ನು ಐಪಿಎಸ್‌ ಸೇವೆಯಿಂದ ವಜಾ ಮಾಡಲಾಗಿತ್ತು. 2002ರ ಗುಜರಾತ್‌ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಸೇವೆಯಿಂದ ವಜಾ ಮಾಡಲಾಗಿದೆ. 

ಬರಹ ಇಷ್ಟವಾಯಿತೆ?

 • 10

  Happy
 • 0

  Amused
 • 0

  Sad
 • 0

  Frustrated
 • 4

  Angry

Comments:

0 comments

Write the first review for this !