26 ದಿನಗಳಲ್ಲಿ ಅತ್ಯಾಚಾರಿಗೆ 20 ವರ್ಷ ಜೈಲು ಶಿಕ್ಷೆ

7
ಚಾಕೋಲೆಟ್ ಆಸೆ ತೋರಿಸಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸುತ್ತಿದ್ದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ

26 ದಿನಗಳಲ್ಲಿ ಅತ್ಯಾಚಾರಿಗೆ 20 ವರ್ಷ ಜೈಲು ಶಿಕ್ಷೆ

Published:
Updated:
Deccan Herald

ಚಿಕ್ಕಬಳ್ಳಾಪುರ: ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ 62 ವರ್ಷದ ಆರೋಪಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎಸ್.ಎಚ್.ಕೋರಡ್ಡಿ ಅವರು ಶನಿವಾರ 20 ವರ್ಷ ಜೈಲು ಶಿಕ್ಷೆ, ₹ 5 ಸಾವಿರ ದಂಡ ವಿಧಿಸಿದ್ದಾರೆ. ಘಟನೆ ನಡೆದ 26 ದಿನಗಳಲ್ಲಿ ಈ ತೀರ್ಪು ಪ್ರಕಟವಾಗಿರುವುದು ವಿಶೇಷ.

ನವೆಂಬರ್ 19 ರಂದು ಗೌರಿಬಿದನೂರು ತಾಲ್ಲೂಕಿನ ಮಂಚೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿತ್ತು.

ದೊಡ್ಡಪ್ಪನ ಮನೆಯಲ್ಲಿ ಬಾಲಕಿ ವಾಸವಾಗಿದ್ದಳು. ಆಕೆಯ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಪಕ್ಕದ ಬೀದಿಯ ಗಂಗಾಧರಪ್ಪ ಎಂಬ ವೃದ್ಧ ಬಾಲಕಿಯನ್ನು ತನ್ನ ಮನೆ ಒಳಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ ಎಂದು ಸಂತ್ರಸ್ತ ಬಾಲಕಿ ಪೋಷಕರು ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 3

  Angry

Comments:

0 comments

Write the first review for this !