ಭಾನುವಾರ, ಜೂನ್ 20, 2021
28 °C

ದೇಶಭಕ್ತಿ ಗೀತೆಗೆ ನೃತ್ಯ: ಮಕ್ಕಳ ಮೇಲೆ ಹಣ ತೂರಿದ್ದ ಕಾನ್‌ಸ್ಟೆಬಲ್‌ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಾಗಪುರ: ಗಣರಾಜ್ಯೋತ್ಸವ ದಿನ ದೇಶಭಕ್ತಿ ಗೀತೆಯೊಂದಕ್ಕೆ ಮಕ್ಕಳು ನೃತ್ಯ ಮಾಡುವಾಗ ಅವರ ಮೇಲೆ ಹಣವನ್ನು ತೂರಿದ್ದ ಹೆಡ್‌ ಕಾನ್‌ಸ್ಟೆಬಲ್‌ನನ್ನು ಮಂಗಳವಾರ ಅಮಾನತು ಮಾಡಲಾಗಿದೆ. 

ನಾಗಪುರದ ಭೀವಾಪುರ ಪೊಲೀಸ್‌ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಹೆಡ್‌ ಕಾನ್‌ಸ್ಟೆಬಲ್‌ ಪ್ರಮೋದ್‌ ವಾಲ್ಕೆ ಸೇವೆಯಿಂದ ಅಮಾನತುಗೊಂಡಿದ್ದಾರೆ. ಇಲ್ಲಿನ ಸ್ಥಳೀಯ ಸರ್ಕಾರಿ ಶಾಲೆಯಲ್ಲಿ ಜನವರಿ 26ರಂದು ಗಣರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿತ್ತು. ವೇದಿಕೆಯಲ್ಲಿ ಮಕ್ಕಳು ದೇಶಭಕ್ತಿ ಗೀತೆಗೆ ಹೆಜ್ಜೆ ಹಾಕುತ್ತಿದ್ದರು. ಈ ವೇಳೆ ವೇದಿಕೆಗೆ ಬಂದ ಪ್ರಮೋದ್‌ ವಾಲ್ಕೆ ಮಕ್ಕಳ ಮೇಲೆ ಹಣವನ್ನು ತೂರಿ ಸಂಭ್ರಮಿಸಿದ್ದರು. ಈ ದೃಶ್ಯವನ್ನು ಮೊಬೈಲ್‌ನಲ್ಲಿ ಚಿತ್ರಿಕರಿಸಿದ್ದ ಕೆಲವರು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದರು. 

ಪ್ರಮೋದ್‌ ವಾಲ್ಕೆ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಪೊಲೀಸರೇ ಇದು ಶಾಲಾ ಕಾರ್ಯಕ್ರಮ, ಬಾರ್‌ ಡ್ಯಾನ್ಸ್‌ ಅಲ್ಲ ಎಂದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು. 

ಈ ಘಟನೆಯಿಂದ ಮುಜುಗರಕ್ಕೆ ಒಳಗಾಗಿದ್ದ ಮಹಾರಾಷ್ಟ್ರ ಪೊಲೀಸರು ಪ್ರಮೋದ್‌ ವಾಲ್ಕೆಯನ್ನು ಸೇವೆಯಿಂದ ಅಮಾನತು ಮಾಡಿದ್ದಾರೆ.  

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು