ಗುರುವಾರ , ಜೂನ್ 4, 2020
27 °C

ದೆಹಲಿ ಸರ್ಕಾರಿ ವೈದ್ಯರಿಗೆ ಕೊರೊನಾ ಸೋಂಕು: ಆಸ್ಪತ್ರೆಯ 45 ಮಂದಿಗೆ ಕ್ವಾರಂಟೈನ್

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಇಲ್ಲಿನ ರಾಜ್ಯ ಕ್ಯಾನ್ಸರ್ ಸಂಸ್ಥೆಯ ವೈದ್ಯರೊಬ್ಬರು ಸೇರಿದಂತೆ 21 ಮಂದಿಗೆ ಕೊರೊನಾ ಸೋಂಕು ತಗುಲಿದ್ದು ಆಸ್ಪತ್ರೆಯ ಎಲ್ಲಾ 45 ಮಂದಿ ಸಿಬ್ಬಂದಿಯನ್ನು ಕ್ವಾರಂಟೈನ್‌‌ನಲ್ಲಿ ಇಡಲಾಗಿದೆ.

ವೈದ್ಯರಿಗೆ ಕೊರೊನಾ ಸೋಂಕು ಪರೀಕ್ಷೆ ನಡೆಸಿದಾಗ ಪಾಸಿಟಿವ್ ಎಂದು ವರದಿ ಬಂದಿದೆ. ಇದಲ್ಲದೆ, ನರ್ಸ್ ಒಬ್ಬರಿಗೂ ಸೋಂಕು ಪರೀಕ್ಷೆ ನಡೆಸಿದಾಗ ಪಾಸಿಟಿವ್ ಎಂದು ವರದಿ ಬಂದಿತ್ತು. ಕೂಡಲೆ ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗೆ ಪರೀಕ್ಷೆ ನಡೆಸಿದಾಗ 21 ಮಂದಿಗೆ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿದೆ. ಕೂಡಲೆ ಎಲ್ಲಾ 45 ಸಿಬ್ಬಂದಿಯನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಅಲ್ಲದೆ, ಎಲ್ಲರಿಗೂ ಮುಂದಿನ ಚಿಕಿತ್ಸೆ ಮುಂದುವರಿದಿದೆ ಎಂದು ಎಎನ್ಐ ವರದಿ ಮಾಡಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು