ಶುಕ್ರವಾರ, ಫೆಬ್ರವರಿ 28, 2020
19 °C

ಕೊರೊನಾ ಸೋಂಕು: ಚೀನಾದಿಂದ ನವದೆಹಲಿಗೆ ಬಂದಿಳಿದ 324 ಭಾರತೀಯರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೊರೊನಾ ವೈರಸ್‌ ಸೋಂಕು ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಚೀನಾದ ವುಹಾನ್‌ನಲ್ಲಿ ನೆಲೆಸಿದ್ದ 324 ಭಾರತೀಯರನ್ನು ನವದೆಹಲಿಗೆ ಕರೆತರಲಾಗಿದೆ. 

ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ ಮತ್ತು ಏರ್ ಇಂಡಿಯಾ ಪ್ಯಾರಾಮೆಡಿಕಲ್‌ನ ಐವರು ವೈದ್ಯರು ಸೇರಿದಂತೆ 324 ಭಾರತೀಯರನ್ನು ಒಳಗೊಂಡ ವಿಮಾನ ಇಂದು ಬೆಳಿಗ್ಗೆ ರಾಷ್ಟ್ರ ರಾಜಧಾನಿಗೆ ಬಂದಿಳಿದಿದೆ. 

ಚೀನಾದಿಂದ ಕರೆತಂದಿರುವ ಭಾರತೀಯರನ್ನು ನವದೆಹಲಿ ಮತ್ತು ಮನೇಸರ್‌ನ ಪ್ರತ್ಯೇಕ ಕೇಂದ್ರಗಳಲ್ಲಿ 14 ದಿನಗಳ ಕಾಲ ಇರಿಸಲಾಗುವುದು. 14 ದಿನಗಳ ನಂತರ ಅವರಲ್ಲಿ ಕೊರೊನಾ ಸೋಂಕಿನ ಯಾವುದೇ ಗುಣ ಲಕ್ಷಣ ಕಂಡುಬರದಿದ್ದಲ್ಲಿ ಮಾತ್ರ ಹೊರಬಿಡಲಾಗುವುದು.

ಚೀನಾಕ್ಕೆ ತೆರಳಿರುವ ಪೈಲಟ್‌ಗಳು, ಎಂಜಿನಿಯರ್‌ಗಳು, ಸಹಾಯಕರು, ಏರ್ ಇಂಡಿಯಾ ಸಿಬ್ಬಂದಿ ಮತ್ತು ವೈದ್ಯರು ಭಾರತಕ್ಕೆ ವಾಪಸ್ಸಾದ ನಂತರ ಅವರನ್ನು ಸಹ ಒಂದು ವಾರ ಕಾಲ ಪ್ರತ್ಯೇಕವಾಗಿ ಇರಿಸಲಾಗುವುದು.

ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ

ಚೀನಾದಲ್ಲಿ 200ಕ್ಕೂ ಅಧಿಕ ಜನರ ಸಾವಿಗೆ ಕಾರಣವಾಗಿ, ಸುಮಾರು 17 ರಾಷ್ಟ್ರಗಳಿಗೆ ಹರಡಿರುವ ಕೊರೊನಾ ವೈರಸ್‌ ಸೋಂಕನ್ನು ‘ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ’ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದೆ. 

ಭಾರತಕ್ಕೂ ಕಾಲಿಟ್ಟ ಕೊರೊನಾ

ಅಪಾಯಕಾರಿ ಕೊರೊನಾ ವೈರಸ್ ಸೋಂಕು ಭಾರತಕ್ಕೂ ಕಾಲಿಟ್ಟಿದೆ. ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು