ಗುರುವಾರ , ಏಪ್ರಿಲ್ 2, 2020
19 °C

21 ಜನರ ವಿರುದ್ಧ ಎಫ್‌ಐಆರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಹಮದಾಬಾದ್: ‘ಕೊರೊನಾ ಸೋಂಕು ಶಂಕೆ ಹಿನ್ನೆಲೆಯಲ್ಲಿ ಅನುಸರಿಸಬೇಕಿದ್ದ ಪ್ರತ್ಯೇಕ ವಾಸ ನಿಯಮವನ್ನು ಉಲ್ಲಂಘಿ
ಸಿರುವ 100ಕ್ಕೂ ಹೆಚ್ಚು ಜನರ ವಿರುದ್ಧ 21 ಎಫ್‌ಐಆರ್ ದಾಖಲಿಸಲಾಗಿದೆ’ ಎಂದು ಗುಜರಾತ್ ಪೊಲೀಸರು ತಿಳಿಸಿದ್ದಾರೆ.

‘ಮಾರ್ಚ್ 21ರ ವೇಳೆಗೆ 10 ಎಫ್‌ಐಆರ್‌ಗಳು ದಾಖಲಾಗಿತ್ತು. ಕಳೆದ ಎರಡು ದಿನಗಳಲ್ಲಿ 11 ಎಫ್‌ಐಆರ್‌ಗಳನ್ನು ದಾಖಲಿಸ
ಲಾಗಿದೆ’ ಎಂದು ಕೊರೊನಾ ಬಿಕ್ಕಟ್ಟು ನಿರ್ವಹಣೆ ನಿಗಾ ತಂಡದಲ್ಲಿರುವ ಹಿರಿಯ ಐಎಎಸ್‌ ಅಧಿಕಾರಿ ತಿಳಿಸಿದ್ದಾರೆ.

‘ಕೊರೊನಾ ಸೋಂಕು ಹೊಂದಿರುವ ಶಂಕೆ ಮೇಲೆ ರಾಜ್ಯದಲ್ಲಿ 11 ಸಾವಿರಕ್ಕೂ ಹೆಚ್ಚು ಜನರನ್ನು 14 ದಿನಗಳ ಅವಧಿಗೆ ಪ್ರತ್ಯೇಕವಾಗಿ ಇರಿಸಲಾಗಿದ್ದು, ಇವರಲ್ಲಿ 224 ಜನರಿಗೆ ಸರ್ಕಾರ ಪ್ರತ್ಯೇಕ ವ್ಯವಸ್ಥೆ ಮಾಡಿದೆ. ಉಳಿದವರು ಮನೆಯಲ್ಲೇ ಇದ್ದಾರೆ’ ಎಂದು ಗುಜರಾತ್ ಸರ್ಕಾರ ಸೋಮವಾರ ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು