ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ಆಂಧ್ರ ಪ್ರದೇಶದಲ್ಲಿ 24 ಹೊಸ ಪ್ರಕರಣ: ದೇಶದಲ್ಲಿ ರೋಗಿಗಳ ಸಂಖ್ಯೆ 1,800

Last Updated 1 ಏಪ್ರಿಲ್ 2020, 18:20 IST
ಅಕ್ಷರ ಗಾತ್ರ

ಬೆಂಗಳೂರು: ಲಾಕ್‌ಡೌನ್‌ನ 8ನೇದಿನವಾದ ಬುಧವಾರ ಕೋವಿಡ್ ರೋಗ ದೃಢ ಪಟ್ಟ ಪ್ರಕರಣಗಳ ಸಂಖ್ಯೆ 1,800 ದಾಟಿದೆ. ಸಾವಿನ ಸಂಖ್ಯೆ 56ಕ್ಕೆ ತಲುಪಿದೆ. ಆಂಧ್ರ ಪ್ರದೇಶದಲ್ಲಿ 43 ಹೊಸ ಪ್ರಕರಣಗಳು ವರದಿಯಾಗಿದ್ದು ಪ್ರಕರಣಗಳ ಸಂಖ್ಯೆ 87ಕ್ಕೇರಿದೆ. ಉತ್ತರ ಪ್ರದೇದಲ್ಲಿ ಇಬ್ಬರು ಮತ್ತು ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಒಂದು ಸಾವು ಸಂಭವಿಸಿದೆ. ದೆಹಲಿಯ ವೈದ್ಯರೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಅಮೆರಿಕದ ರೋಗ ನಿಯಂತ್ರಣ ಮತ್ತು ಪ್ರತಿರೋಧ ಸಂಸ್ಥೆ ಪ್ರಕಾರ ಪ್ರಕರಣಗಳ ಸಂಖ್ಯೆ 163,539ಕ್ಕೆ ತಲುಪಿದ್ದು 2,860 ಸಾವು ವರದಿಯಾಗಿದೆ. ಅಮೆರಿಕದಲ್ಲಿ ಸಾವಿನ ಸಂಖ್ಯೆ ಚೀನಾದಿಂದ ಜಾಸ್ತಿಯಾಗಿದೆ ಎಂದು ಜಾನ್ ಹಾಪ್ಕಿನ್ಸ್ ವರದಿ ಹೇಳಿದೆ.

ಆಂಧ್ರ ಪ್ರದೇಶದಲ್ಲಿ 24 ಹೊಸ ಪ್ರಕರಣಗಳು ವರದಿಯಾಗಿತ್ತು ಪ್ರಕರಣಗಳ ಸಂಖ್ಯೆ 111ಕ್ಕೇರಿದೆ.

ರಾಜಸ್ಥಾನದಲ್ಲಿ 12 ಮಂದಿಗೆ ಕೋವಿಡ್ -19 ದೃಢಪಟ್ಟಿದೆ. ದೆಹಲಿಯ ತಬ್ಲಿಗಿ ಜಮಾತ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದವರಾಗಿದ್ದಾರೆ ಇವರು. ಇಲ್ಲಿಯವರೆಗೆ ರಾಜಸ್ಥಾನದಲ್ಲಿ 120 ಪ್ರಕರಣಗಳು ವರದಿಯಾಗಿವೆ ಎಂದು ರಾಜಸ್ಥಾನ ಆರೋಗ್ಯ ಇಲಾಖೆ ಹೇಳಿದೆ.

ಉತ್ತರ ಪ್ರದೇಶದಲ್ಲಿ ಕೋವಿಡ್ ರೋಗಿಯೊಬ್ಬರು ಸಾವಿಗೀಡಾಗಿದ್ದು , ಸಾವಿನ ಸಂಖ್ಯೆ 2ಕ್ಕೇರಿದೆ.

ತಬ್ಲಿಗಿ ಜಮಾತ್‌ನಲ್ಲಿ ಭಾಗವಹಿಸಿದ್ದ 1800 ಮಂದಿಯನ್ನು 9 ಆಸ್ಪತ್ರೆ ಮತ್ತು ಕ್ವಾರಂಟೈನ್ ಕೇಂದ್ರಗಳಲ್ಲಿ ದಾಖಲಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಅಸ್ಸಾಂನಲ್ಲಿ 5 ಕೋವಿಡ್ ಪ್ರಕರಣಗಳು ವರದಿಯಾಗಿವೆ.

ದೆಹಲಿ: ಕೋವಿಡ್-19 ರೋಗಿಗಳ ಶುಶ್ರೂಷೆ ಮಾಡಿದ ಆರೋಗ್ಯ ಕಾರ್ಯಕರ್ತರು ಸಾವಿಗೀಡಾದರೆ ಅವರ ಕುಟುಂಬಕ್ಕೆ 1ಕೋಟಿ ಪರಿಹಾರ ಧನ ನೀಡುವುದಾಗಿ ಅರವಿಂದ ಕೇಜ್ರಿವಾಲ್ ಘೋಷಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಎರಡು ದಿನಗಳ ಹಿಂದೆ ಸಾವಿಗೀಡಾದ 25ರ ಹರೆಯದ ವ್ಯಕ್ತಿಗೆ ಕೋವಿಡ್ ರೋಗವಿತ್ತು ಎಂದು ವೈದ್ಯಕೀಯ ವರದಿಯಲ್ಲಿ ಹೇಳಿದೆ. ಉತ್ತರ ಪ್ರದೇಶದಲ್ಲಿ ಕೋವಿಡ್ ಬಾಧಿತ ಮೊದಲ ಸಾವು ಇದಾಗಿದೆ.

ಬಿಹಾರದಲ್ಲಿ 23 ಪ್ರಕರಣಗಳು ಪತ್ತೆಯಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಇಬ್ಬರು ರೋಗಿಗಳು ಸಾವಿಗೀಡಾಗಿದ್ದಾರೆ.

ದೆಹಲಿ ರಾಜ್ಯ ಕ್ಯಾನ್ಸರ್ ಇನ್ಸಿಟ್ಯೂಟ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರಿಗೆ ಕೋವಿಡ್ ರೋಗ ದೃಢಪಟ್ಟಿದೆ.

ಮಧ್ಯಪ್ರದೇಶದಲ್ಲಿ ಕೋವಿಡ್ ಬಾಧಿತ 65ರ ಹರೆಯದ ವ್ಯಕ್ತಿಯೊಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. 20 ಹೊಸ ಪ್ರಕರಣಗಳು ವರದಿಯಾಗಿದ್ದು ಪ್ರಕರಣಗಳ ಸಂಖ್ಯೆ 86ಕ್ಕೇರಿದೆ.

ಮಹಾರಾಷ್ಟ್ರದಲ್ಲಿ ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದು ಸಾವಿನ ಸಂಖ್ಯೆ 12ಕ್ಕೇರಿದೆ.

ಬ್ರಿಟನ್‌ನಲ್ಲಿ ಕೋವಿಡ್ ರೋಗ ತಗುಲಿದ್ದ 13ರ ಹರೆಯದ ಬಾಲಕ ಸಾವು

ಚೀನಾ ಲಾಕ್‌ಡೌನ್ ಮಾಡಿದ್ದರಿಂದ 700,00 ಹೊಸ ಪ್ರಕರಣಗಳನ್ನು ತಡೆಯಲು ಸಾಧ್ಯವಾಯಿತು ಎಂದು ತಜ್ಞರುಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT