ಬುಧವಾರ, ಆಗಸ್ಟ್ 3, 2022
23 °C

ಕಾಲ್ನಡಿಗೆ ನಿಲ್ಲಿಸಿ, ನಿಮ್ಮ ಕಾಳಜಿ ನಮಗಿದೆ: ಕಾರ್ಮಿಕರಿಗೆ ಕೇಜ್ರಿವಾಲ್‌ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ವಲಸೆ ಕಾರ್ಮಿಕರಿಗಾಗಿ ಹೆಚ್ಚಿನ ರೈಲುಗಳ ವ್ಯವಸ್ಥೆ ಮಾಡುತ್ತಿದ್ದೇವೆ. ಕಾಲ್ನಡಿಗೆಯಲ್ಲಿ ಪ್ರಯಾಣಿಸದಂತೆ ನಾನು ಅವರಿಗೆ ಮನವಿ ಮಾಡುತ್ತೇನೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಕೇಳಿಕೊಂಡಿದ್ದಾರೆ.

ದೆಹಲಿಯಲ್ಲಿ ಭಾನುವಾರ ಮಾತನಾಡಿರುವ ಅವರು, 'ವಲಸಿಗರಿಗಾಗಿ ಹೆಚ್ಚಿನ ರೈಲುಗಳ ವ್ಯವಸ್ಥೆ ಮಾಡುತ್ತಿದ್ದೇವೆ. ಕಾಲ್ನಡಿಗೆಯಲ್ಲಿ ಪ್ರಯಾಣಿಸದಂತೆ ನಾನು ಅವರಿಗೆ ಮನವಿ ಮಾಡುತ್ತೇನೆ. ಇದು ಸುರಕ್ಷಿತವಲ್ಲ. ನಿಮ್ಮ ಜವಾಬ್ದಾರಿಯನ್ನು ನಾವು ತೆಗೆದುಕೊಳ್ಳುತ್ತೇವೆ. ನಿಮ್ಮ ಬಗ್ಗೆ ಕಾಳಜಿ ವಹಿಸಲು ನಾವು ಇಲ್ಲಿದ್ದೇವೆ' ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಕೇಳಿಕೊಂಡಿದ್ದಾರೆ.  

ಇದೇ ವೇಳೆ, ದೆಹಲಿಯಲ್ಲಿ ಕೊರೊನಾ ಸೋಂಕಿನ ಸ್ಥಿತಿಗತಿಗಳ ಬಗ್ಗೆ ತಿಳಿಸಿರುವ ಕೇಜ್ರಿವಾಲ್‌, 'ದೆಹಲಿಯ ಒಟ್ಟು 7000 ಕೊರೊನಾ ಸೋಂಕಿತರಲ್ಲಿ, ಸುಮಾರು 1500 ಸೋಂಕಿತರು ಆಸ್ಪತ್ರೆಯಲ್ಲಿದ್ದಾರೆ. ಆಸ್ಪತ್ರೆಯಲ್ಲಿರುವ 1500 ಜನರಲ್ಲಿ 27 ಮಂದಿ ಮಾತ್ರ ವೆಂಟಿಲೇಟರ್‌ನಲ್ಲಿದ್ದಾರೆ. ಹೆಚ್ಚಿನ ಪ್ರಕರಣಗಳು ಸಕಾರಾತ್ಮಕವಾಗಿವೆ' ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು