ಮಂಗಳವಾರ, ಮೇ 26, 2020
27 °C

ಕೊರೊನಾ ಸೋಂಕಿತನನ್ನು ಕರೆತಂದಿದ್ದ ಏರ್‌ ಇಂಡಿಯಾ ಸಿಬ್ಬಂದಿಗೆ ಸೂಚನೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕೊರೊನಾ ಸೋಂಕು ಪೀಡಿತ ಪ್ರಯಾಣಿಕನನ್ನು ಕರೆತಂದಿದ್ದ ಏರ್ ಇಂಡಿಯಾದ ಸಿಬ್ಬಂದಿಯನ್ನು 14 ದಿನಗಳ ಕಾಲ ಅವರವರ ಮನೆಗಳಲ್ಲಿ ಪ್ರತ್ಯೇಕವಾಗಿರುವಂತೆ ಸಂಸ್ಥೆಯ ಅಧಿಕಾರಿಗಳು ಸೂಚಿಸಿದ್ದಾರೆ.

‘ಫೆ. 25ರಂದು ವಿಯೆನ್ನಾದಿಂದ ದೆಹಲಿಗೆ ಬಂದ ಏರ್‌ ಇಂಡಿಯಾ ವಿಮಾನದಲ್ಲಿ ಕೊರೊನಾ ಪೀಡಿತ ಪ್ರಯಾಣಿಕ ಇದ್ದರು. ಈ ಹಿನ್ನೆಲೆಯಲ್ಲಿ ವಿಮಾನದ ಸಿಬ್ಬಂದಿಯನ್ನು 14 ದಿನಗಳ ಕಾಲ ಪ್ರತ್ಯೇಕವಾಗಿ ಇರುವಂತೆ ಸೂಚಿಸಲಾಗಿದೆ. ಈ ಅವಧಿಯಲ್ಲಿ ಸೋಂಕಿನ ಲಕ್ಷಣಗಳೇನಾದರೂ ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು