ಮಂಗಳವಾರ, ಜುಲೈ 27, 2021
23 °C

Covid-19 India Update: ಕಳೆದ 24 ಗಂಟೆಗಳಲ್ಲಿ 260 ಮಂದಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

covid-19

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 9,304 ಹೊಸ ಪ್ರಕರಣಗಳು ವರದಿಯಾಗಿದ್ದು  ಕೋವಿಡ್-19 ರೋಗದಿಂದ 260 ಮಂದಿ ಸಾವಿಗೀಡಾಗಿದ್ದಾರೆ. ದೇಶದಲ್ಲಿ ಒಟ್ಟು ಕೋವಿಡ್- 19 ರೋಗಿಗಳ ಸಂಖ್ಯೆ 2,16,919 ಆಗಿದೆ. ಇದರಲ್ಲಿ 1,06,737 ಸಕ್ರಿಯ ಪ್ರಕರಣಗಳಿದ್ದು 1,04,107 ಮಂದಿ ಚೇತರಿಸಿಕೊಂಡಿದ್ದಾರೆ.ಇಲ್ಲಿಯವರೆಗೆ  6,075 ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.  

ದೇಶದಲ್ಲಿ ಇಲ್ಲಿಯವರೆಗೆ 42, 42,718 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ  1,39,485 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ಹೇಳಿದೆ.

ಆಂಧ್ರಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 98 ಹೊಸ ಪ್ರಕರಣಗಳು ವರದಿಯಾಗಿದ್ದು ಒಟ್ಟು ಪ್ರಕರಣಗಳ ಸಂಖ್ಯೆ 3377ಕ್ಕೇರಿದೆ.

ಒಡಿಶಾದಲ್ಲಿ 90 ಹೊಸ ಪ್ರಕರಣಗಳು ವರದಿಯಾಗಿದ್ದು ಸೋಂಕಿತರ ಸಂಖ್ಯೆ 2478 ಆಗಿದೆ. 1053 ಸಕ್ರಿಯ ಪ್ರಕರಣಗಳಿವೆ ಎಂದು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೇಳಿದೆ.

ಇದನ್ನೂ ಓದಿ: ಕೋವಿಡ್: 110 ದೇಶಗಳಲ್ಲಿ ಭಾರತಕ್ಕಿಂತ ಕಡಿಮೆ ಸಾವು

ಮೇಘಾಲಯದಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ 33 ಆಗಿದೆ. ಹೊರರಾಜ್ಯದಿಂದ ಬಂದ ಇಬ್ಬರಿಗೆ ಸೋಂಕು ದೃಢಪಟ್ಟಿರುವುದಾಗಿ ಮುಖ್ಯಮಂತ್ರಿ ಕೊನಾರ್ಡ್ ಸಾಂಗ್ಮ ಹೇಳಿದ್ದಾರೆ.

ಪಂಜಾಬ್‌ನಲ್ಲಿ 300 ಸಕ್ರಿಯ ಪ್ರಕರಣಗಳಿದ್ದು ಸೋಂಕು ದೃಢಪಟ್ಟವರ ಸಂಖ್ಯೆ 2,376ಕ್ಕೇರಿದೆ. ಬುಧವಾರ 34 ಮಂದಿಗೆ ಸೋಂಕು ದೃಢಪಟ್ಟಿದ್ದು 12 ರೋಗಿಗಳು ಚೇತರಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹೇಳಿದ್ದಾರೆ.

ಮಿಜೋರಾಂನಲ್ಲಿ ಇಲ್ಲಿಯವರೆಗೆ  17  ಮಂದಿಗೆ ಸೋಂಕು ತಗುಲಿದ್ದು ಓರ್ವ ರೋಗಿ ಗುಣಮುಖರಾಗಿದ್ದಾರೆ. 16 ಸಕ್ರಿಯ ಪ್ರಕರಣಗಳು ಇವೆ ಎಂದು ಮಿಜೋರಾಂ ಸರ್ಕಾರ ಹೇಳಿದೆ. ರೈಲ್ವೆ ಇಲಾಖೆ ಸಿಬ್ಬಂದಿ ಮತ್ತು ಅವರ ಕುಟುಂಬದವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಇವರು ಜೂನ್ 1ರಂದು ಕಚೇರಿಗೆ ಹಾಜರಾಗಿದ್ದರು ಎಂದು ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು