ಸೋಮವಾರ, ಜುಲೈ 26, 2021
21 °C

Covid-19 India Updates| 24 ಗಂಟೆಗಳಲ್ಲಿ 311 ಸಾವು, 11,929 ಸೋಂಕು ಪ್ರಕರಣ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Delhi hospital

ನವದೆಹಲಿ: ದೇಶದಾದ್ಯಂತ ಕೋವಿಡ್ -19 ರೋಗದಿಂದ ಸಾವಿಗೀಡಾದವರ ಸಂಖ್ಯೆ 9,195 ಆಗಿದೆ. ಕೇಂದ್ರ ಆರೋಗ್ಯ ಮತ್ತು ಕಲ್ಯಾಣ ಇಲಾಖೆ ಸಚಿವಾಲಯದ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 311 ಮಂದಿ ಸಾವಿಗೀಡಾಗಿದ್ದಾರೆ. ಒಂದೇ ದಿನ 11,929 ಸೋಂಕು ಪ್ರಕರಣಗಳು ಪತ್ತೆಯಾಗಿವೆ.

 ಜಾರ್ಖಂಡ್‌ನಲ್ಲಿ 54 ಮಂದಿಗೆ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 1,711 ಆಗಿದೆ. ಅದೇ ವೇಳೆ ಬಿಹಾರದಲ್ಲಿ 193 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ  6,289 ಆಗಿದೆ.

ಆಂಧ್ರ ಪ್ರದೇಶದಲ್ಲಿ ಸೋಂಕಿತರ ಸಂಖ್ಯೆ 5680 ಕ್ಕೇರಿದ್ದು ಈವರೆಗೆ 80 ಮಂದಿ ಸಾವಿಗೀಡಾಗಿದ್ದಾರೆ. ಬಿಹಾರದಲ್ಲಿ  ಸೋಂಕಿತರ ಸಂಖ್ಯೆ  6103 ಆಗಿದ್ದು  36 ಮಂದಿ ಸಾವಿಗೀಡಾಗಿದ್ದಾರೆ.

ದೆಹಲಿಯಲ್ಲಿ 22212 ಕ್ರಿಯಾಶೀಲ ಪ್ರಕರಣಗಳಿದ್ದು 36824 ಮಂದಿಗೆ ಸೋಂಕು ದೃಢಪಟ್ಟಿದೆ. ಇಲ್ಲಿಯವರೆಗೆ 1214 ಮಂದಿ ಸಾವಿಗೀಡಾಗಿದ್ದಾರೆ.

ಗುಜರಾತಿನಲ್ಲಿ   ಸೋಂಕಿತರ ಸಂಖ್ಯೆ 22527 ಆಗಿದ್ದು 1415 ಮಂದಿ ಸಾವಿಗೀಡಾಗಿದ್ದಾರೆ. ಕೇರಳದಲ್ಲಿ  2322  ಮಂದಿಗೆ ಸೋಂಕು ದೃಢಪಟ್ಟಿದ್ದು  ಇಲ್ಲಿಯವರೆಗೆ 19 ಮಂದಿ ಸಾವಿಗೀಡಾಗಿದ್ದಾರೆ.  ಮಹಾರಾಷ್ಟ್ರದಲ್ಲಿ  49628  ಕ್ರಿಯಾಶೀಲ ಪ್ರಕರಣಗಳಿದ್ದು ಈವರೆಗೆ 3717 ಮಂದಿ ಮೃತಪಟ್ಟಿದ್ದಾರೆ.

ಮಧ್ಯಪ್ರದೇಶದಲ್ಲಿ 10433 ಸೋಂಕಿತರಿದ್ದು ಮೃತಪಟ್ಟವರ ಸಂಖ್ಯೆ 440 ಆಗಿದೆ. ತಮಿಳುನಾಡಿನಲ್ಲಿ 40698  ಮಂದಿಗೆ ಸೋಂಕು ತಗಲುಲಿದ್ದು ಇಲ್ಲಿಯವರೆಗೆ 367 ಮಂದಿ ಸಾವಿಗೀಡಾಗಿದ್ದಾರೆ. ಉತ್ತರ ಪ್ರದೇಶದಲ್ಲಿ 12616 ಮಂದಿಗೆ ಸೋಂಕಿತರು ಇದ್ದಾರೆ. 365 ಮಂದಿ ಈವರೆಗೆ ಮೃತಪಟ್ಟಿದ್ದಾರೆ. ಅದೇ ವೇಳೆ ಪಶ್ಚಿಮ ಬಂಗಾಳದಲ್ಲಿ 10244 ಮಂದಿಗೆ ಸೋಂಕು ತಗುಲಿದ್ದು 451 ಮಂದಿ ಸಾವಿಗೀಡಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು