ಮಂಗಳವಾರ, ಮಾರ್ಚ್ 31, 2020
19 °C

ಕೊರೊನಾ ಭೀತಿ: ಹೋಳಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದಿಲ್ಲವೆಂದ ಪ್ರಧಾನಿ ಮೋದಿ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Narendra Modi

ನವದೆಹಲಿ: ಕೊರೊನಾ ವೈರಸ್ ಸೋಂಕು (ಕೋವಿಡ್‌19) ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಈ ವರ್ಷ ಹೋಳಿ ಹಬ್ಬದ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

‘ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯುವ ಸಲುವಾಗಿ ಜನರು ಸಾಮೂಹಿಕವಾಗಿ ಒಂದೆಡೆ ಸೇರುವುದನ್ನು ಆದಷ್ಟು ಕಡಿಮೆ ಮಾಡಬೇಕು ಎಂದು ವಿಶ್ವದಾದ್ಯಂತ ತಜ್ಞರು ಸಲಹೆ ನೀಡಿದ್ದಾರೆ. ಹೀಗಾಗಿ ಈ ವರ್ಷ ಯಾವುದೇ ಹೋಳಿ ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇನೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಜಗತ್ತಿನಾದ್ಯಂತ ಮೂರು ಸಾವಿರಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿರುವ ಕೊರೊನಾ ವೈರಸ್‌ ಸೋಂಕು ಪತ್ತೆ ಪ್ರಕರಣಗಳು ಭಾರತದಲ್ಲಿಯೂ ಹೆಚ್ಚುತ್ತಿವೆ. ಮಂಗಳವಾರದವರೆಗೆ 6 ಪ್ರಕರಣಗಳು ದೃಢಪಟ್ಟಿದ್ದವು. ಇದೀಗ ಭಾರತಕ್ಕೆ ಬಂದಿರುವ 15 ಮಂದಿ ಇಟಲಿ ಪ್ರವಾಸಿಗರಲ್ಲಿ ಸೋಂಕು ಇರುವುದು ಖಚಿತವಾಗಿದೆ.

ಇನ್ನಷ್ಟು...

ಭಾರತಕ್ಕೆ ಬಂದಿರುವ 15 ಇಟಲಿ ಪ್ರವಾಸಿಗರಲ್ಲಿ ಕೊರೊನಾ ಸೋಂಕು ಪತ್ತೆ

ಕೊರೊನಾ ಕಳವಳ | ಭಾರತದಲ್ಲಿ ಮತ್ತೊಂದು ಪ್ರಕರಣ ದೃಢ: ಹಲವು ಮಂದಿಯ ಮೇಲೆ ನಿಗಾ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು