ಸೋಮವಾರ, ಜೂನ್ 1, 2020
27 °C

ದೆಹಲಿಯ ಸಫ್ದರ್‌ಜಂಗ್‌ ಆಸ್ಪತ್ರೆಯ ಇಬ್ಬರು ವೈದ್ಯರಲ್ಲಿ ಕೊರೊನಾ ಸೋಂಕು ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ದೆಹಲಿಯ ಸಫ್ದರ್‌ಜಂಗ್‌ ಆಸ್ಪತ್ರೆಯ ಇಬ್ಬರು ವೈದ್ಯರಲ್ಲಿ ಕೊರೊನಾ ವೈರಸ್‌ ಸೋಂಕು ಪತ್ತೆಯಾಗಿದೆ. 

ಕೋವಿಡ್‌-19 ಸೋಂಕಿತರಿಗೆ ಚಿಕಿತ್ಸೆ ನೀಡುವ ತಂಡದ ಸದಸ್ಯರಾಗಿರುವ ಸಫ್ದರ್‌ಜಂಗ್‌ ಆಸ್ಪತ್ರೆಯ ವೈದ್ಯರೊಬ್ಬರಿಗೆ ಕರ್ತವ್ಯದ ಸಮಯದಲ್ಲಿ ಈ ಸೋಂಕು ತಗುಲಿರುವುದು ದೃಢವಾಗಿದೆ.

ಕೊರೊನಾ ಸೋಂಕು ಪೀಡಿತ ಇನ್ನೊಬ್ಬ ಮಹಿಳಾ ವೈದ್ಯರು ಸಫ್ದರ್‌ಜಂಗ್‌ ಆಸ್ಪತ್ರೆಯಲ್ಲಿ ಅಭ್ಯಸಿಸುತ್ತಿದ್ದು, ವಿದೇಶಿ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ ಎಂದು ತಿಳಿದುಬಂದಿದೆ. 

ಇಬ್ಬರು ವೈದ್ಯರಿಗೆ ಕೋವಿಡ್‌-19 ಗುಣಲಕ್ಷಣಗಳು ಕಾಣಿಸಿಕೊಂಡಿದ್ದು, ಮಂಗಳವಾರ ಸೋಂಕು ಇರುವುದು ದೃಢವಾಗಿದೆ. 

ಇಬ್ಬರನ್ನು ಸಫ್ದರ್‌ಜಂಗ್‌ ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

'ಇಬ್ಬರು ಸೋಂಕಿತರ ಸಂಪರ್ಕಕ್ಕೆ ಬಂದಿರುವ ಎಲ್ಲ ವೈದ್ಯರು ಮತ್ತು ಸಿಬ್ಬಂದಿಯನ್ನು ಪರೀಕ್ಷಿಸಲಾಗಿದ್ದು, ಇಲ್ಲಿಯವರೆಗೆ ಬೇರೆ ಯಾರಲ್ಲೂ ಕೊರೊನಾ ಸೋಂಕು ಇರುವುದು ಪತ್ತೆಯಾಗಿಲ್ಲ' ಎಂದು ಮೂಲಗಳು ತಿಳಿಸಿವೆ.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು