ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಭೀತಿ: ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮೋದಿ ವಿಡಿಯೊ ಕಾನ್ಫರೆನ್ಸ್

Last Updated 2 ಏಪ್ರಿಲ್ 2020, 8:04 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ವ್ಯಾಪಕವಾಗುತ್ತಿರುವ ಕೊರೊನಾ ಸೋಂಕುಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ್ದಾರೆ.

ಆ ಮೂಲಕ ರಾಜ್ಯಗಳಲ್ಲಿ ನಡೆಯುತ್ತಿರುವ ಬೆಳವಣಿಗಗಳ ಕುರಿತು ಪ್ರಧಾನಿ ಮೋದಿ ಚರ್ಚೆ ನಡೆಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ಸಭೆಯಲ್ಲಿ ಹಾಜರಿದ್ದರು.

ಈಗಾಗಲೇ ದೇಶದಲ್ಲಿ ಕೊರೊನಾ ವೈರಸ್‌ ಸೋಂಕಿಗೆ ಸಂಬಂಧಿಸಿದ ಸಾವಿನ ಸಂಖ್ಯೆ 50ಕ್ಕೆ ತಲುಪಿದೆ.

ಕಳೆದ 24 ಗಂಟೆಗಳಲ್ಲಿ 12 ಮಂದಿ ಕೊರೊನಾ ಸೋಂಕಿನಿಂದ ಮೃತ ಪಟ್ಟಿದ್ದಾರೆ.

ಇಲ್ಲಿಯವರೆಗೆ ದೇಶದಲ್ಲಿ ಕೊರೊನಾ ಸೋಂಕು ಇರುವುದು ದೃಢವಾದವರ ಸಂಖ್ಯೆ 1965ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

ದೇಶದಾದ್ಯಂತ ಉಲ್ಬಣಗೊಳ್ಳುತ್ತಿರುವ ಕೊರೊನಾ ಸೋಂಕು ಹರಡುವಿಕೆಯಆತಂಕಕಾರಿ ಪರಿಸ್ಥಿತಿ ಬಗ್ಗೆ ಪ್ರಧಾನಿ ಮೋದಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಅವಲೋಕನ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT