ಬುಧವಾರ, ಜೂನ್ 3, 2020
27 °C

ಕೇವಲ ಚಪ್ಪಾಳೆ, ತಟ್ಟೆ, ದೀಪಗಳ ಮೂಲಕ ಯುದ್ದ ಗೆಲ್ಲಲು ಸಾಧ್ಯವಿಲ್ಲ: ಶಿವಸೇನಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ಚಪ್ಪಾಳೆ ಹೊಡೆಯುವುದು, ತಟ್ಟೆ ಬಾರಿಸುವುದು ಮತ್ತು ದೀಪಗಳನ್ನು ಬೆಳಗಿಸುವುದರ ಮೂಲಕ ಕೊರೊನಾ ವೈರಸ್‌ ವಿರುದ್ಧದ ಯುದ್ದವನ್ನು ಗೆಲ್ಲಲು ಸಾಧ್ಯವಿಲ್ಲ ಎಂದು ಮಂಗಳವಾರ ಶಿವಸೇನಾ ಹೇಳಿದೆ. 

ಈ ಬಗ್ಗೆ ಶಿವಸೇನಾ ಮುಖವಾಣಿ ‘ಸಾಮ್ನಾ’ ಸಂಪಾದಕೀಯದಲ್ಲಿ ಬರೆಯಲಾಗಿದ್ದು, 'ಪ್ರಧಾನಿ ನರೇಂದ್ರ ಮೋದಿಯವರ ಮನವಿಯನ್ನು ಜನರು ತಪ್ಪಾಗಿ ಗ್ರಹಿಸಿದ್ದಾರೆ. ಮೋದಿಯವರು ಜನರಿಂದ ಏನು ಬಯಸಿದ್ದರು ಎಂಬುದನ್ನು ಸ್ಪಷ್ಟವಾಗಿ ಹೇಳಬೇಕಿತ್ತು. ಆದೇಶಗಳನ್ನು ಪಾಲಿಸದವರಿಗೆ ಶಿಕ್ಷೆಯಾಗಬೇಕು' ಎಂದು ಹೇಳಿದೆ. 

ಭಾನುವಾರ ರಾತ್ರಿ 9 ಗಂಟೆಗೆ ಒಂಬತ್ತು ನಿಮಿಷಗಳ ಕಾಲ ತಮ್ಮ ಮನೆಗಳಲ್ಲಿ ವಿದ್ಯುತ್‌ ಲೈಟ್‌ಗಳನ್ನು ಆರಿಸಿ ದೀಪ ಬೆಳಗಿಸುವುದರ ಮೂಲಕ ಒಗ್ಗಟ್ಟನ್ನು ಪ್ರದರ್ಶಿಸಬೇಕೆಂದು ಪ್ರಧಾನಿ ಮೋದಿ ಕಳೆದ ವಾರ ಜನರಿಗೆ ಮನವಿ ಮಾಡಿದ್ದರು.

ಪ್ರಧಾನಿ ಕರೆಗೆ ಓಗೊಟ್ಟಿದ್ದ ಜನರು ತಮ್ಮ ಮನೆಗಳಲ್ಲಿ ಮೇಣದಬತ್ತಿಗಳು ಮತ್ತು ದೀಪಗಳನ್ನು ಬೆಳಗಿಸಿದ್ದರು. 

ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಶಿವಸೇನಾ, 'ಕೇವಲ ತಟ್ಟೆ, ಚಪ್ಪಾಳೆ ಮತ್ತು ದೀಪಗಳಿಂದ ಕೊರೊನಾ ವಿರುದ್ಧದ ಯುದ್ದವನ್ನು ಗೆಲ್ಲಲು ಸಾಧ್ಯವಿಲ್ಲ. ಪ್ರಧಾನಿಯವರ ಕರೆಯನ್ನು ಜನರು ತಪ್ಪಾಗಿ ಅರ್ಥ ಮಾಡಿಕೊಂಡಿರಬಹುದು, ಅಥವಾ, ಇಂತಹ ಹಬ್ಬದ ವಾತಾವರಣ ಪ್ರಧಾನಿಯವರಿಗೆ ಬೇಕಾಗಿರಬಹುದು' ಎಂದು ಟೀಕಿಸಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು