ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳಕ್ಕೆ ಅಡಿಯಿಟ್ಟ ಕೊರೊನಾ ವೈರಸ್

Last Updated 30 ಜನವರಿ 2020, 20:00 IST
ಅಕ್ಷರ ಗಾತ್ರ

ನವದೆಹಲಿ: ಚೀನಾದ ವುಹಾನ್ ಪ್ರಾಂತ್ಯದಲ್ಲಿ ಹರಡಿರುವ ಅಪಾಯಕಾರಿ ‘ಕೊರೊನಾ ವೈರಸ್’ ಸೋಂಕು ಭಾರತಕ್ಕೂ ಅಡಿಯಿಟ್ಟಿದೆ. ಮೊದಲ ಪ್ರಕರಣ ಕೇರಳದಲ್ಲಿ ಪತ್ತೆಯಾಗಿದೆ.

ವಿದ್ಯಾರ್ಥಿನಿಯಲ್ಲಿ ಸೋಂಕು ಇರುವುದನ್ನು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ದೃಢಪಡಿಸಿದೆ. ಚೀನಾದ ವುಹಾನ್ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಭಾರತಕ್ಕೆ ಮರಳಿದ ಬಳಿಕ ಅವರನ್ನು ತಪಾಸಣೆಗೆ ಒಳಪಡಿಸಿದಾಗ ಸೋಂಕು ಇರುವುದು ಗೊತ್ತಾಗಿದೆ.

ವಿದ್ಯಾರ್ಥಿನಿಯನ್ನು ತ್ರಿಶ್ಶೂರ್‌ನ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ. ಆರೋಗ್ಯ ಸ್ಥಿರವಾಗಿದ್ದು, ವೈದ್ಯರ ತಂಡ ನಿಗಾ ಇಟ್ಟಿದೆ ಎಂದು ಕೇರಳ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಚೀನಾದಿಂದ ವಾಪಸಾದ ಇತರ ಮೂವರು ವಿದ್ಯಾರ್ಥಿಗಳನ್ನು ಪ್ರತ್ಯೇಕ ವಾರ್ಡ್‌ಗಳಲ್ಲಿ ಇರಿಸಿ, ಆರೋಗ್ಯ ಗಮನಿಸಲಾಗುತ್ತಿದೆ. ಒಟ್ಟಾರೆ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿರುವ 10 ಜನರ ಮೇಲೆ ವೈದ್ಯಕೀಯ ತಂಡ ನಿಗಾ ವಹಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT