ಬೆಂಗಳೂರು: ದೇಶದಾದ್ಯಂತ 21 ದಿನಗಳ ಲಾಕ್‌ಡೌನ್ ಮುಗಿದು, ಇನ್ನೂ 19 ದಿನಗಳ ವರೆಗೂ ದಿಗ್ಬಂಧನ ವಿಸ್ತರಿಸಲಾಗಿದೆ. ಈ ನಡುವೆ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಏರಿಕೆಯಾಗುತ್ತಲೇ ಇದ್ದು, ಬುಧವಾರ ದೇಶದಲ್ಲಿ ಒಟ್ಟು ಸೋಂಕು ಪ್ರಕರಣಗಳು 11,439 ತಲುಪಿದೆ.

ಕಳೆದ 24 ಗಂಟೆಗಳಲ್ಲಿ ಒಟ್ಟು 1,076 ಹೊಸ ಪ್ರಕರಣಗಳು ದಾಖಲಾಗಿದ್ದು ಸೋಂಕಿಗೆ 38 ಮಂದಿ ಬಲಿಯಾಗಿದ್ದಾರೆ.

ದೇಶದಲ್ಲಿ ಒಟ್ಟು ಕೋವಿಡ್-19 ಧೃಡಪಟ್ಟ 11,439 ಪ್ರಕರಣಗಳ ಪೈಕಿ 377 ಮಂದಿ ಮೃತಪಟ್ಟಿದ್ದಾರೆ. 1,306 ಜನ ಗುಣಮುಖರಾಗಿದ್ದು, ವಿವಿಧ ರಾಜ್ಯಗಳಲ್ಲಿ 9,756 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ಒಟ್ಟು 2,687 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಸೋಂಕಿನಿಂದ ಈಗಾಗಲೇ 178 ಮಂದಿ ಸಾವಿಗೀಡಾಗಿದ್ದಾರೆ. ದೇಶದಲ್ಲಿ ಅತಿ ಹೆಚ್ಚು ಸಾವು ಮಹಾರಾಷ್ಟ್ರದಲ್ಲಿ ದಾಖಲಾಗಿದೆ.

ಇನ್ನೂ ದೆಹಲಿಯಲ್ಲಿ ಒಟ್ಟು 1,561 ಪ್ರಕರಣಗಳು, 30 ಮಂದಿ ಸಾವು; ತಮಿಳುನಾಡಿನಲ್ಲಿ 1,204 ಪ್ರಕರಣಗಳು, 12 ಮಂದಿ ಸಾವು; ರಾಜಸ್ಥಾನದಲ್ಲಿ 969 ಪ್ರಕರಣಗಳು, 3 ಮಂದಿ ಸಾವಿಗೀಡಾಗಿದ್ದಾರೆ. ಕರ್ನಾಟಕದಲ್ಲಿ 260 ಸೋಂಕು ಪ್ರಕರಣಗಳು ದಾಖಲಾಗಿದ್ದು, 10 ಮಂದಿ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದಲ್ಲಿ 730 ಸೋಂಕು ಪ್ರಕರಣಗಳ ಪೈಕಿ 50 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.