ಬುಧವಾರ, ಜುಲೈ 15, 2020
27 °C

Covid-19 India Update | ತಮಿಳುನಾಡಿನಲ್ಲಿ 3943 ಹೊಸ ಪ್ರಕರಣ, 60 ಸಾವು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Covid-19 India

ನವದೆಹಲಿ: ದೇಶದಾದ್ಯಂತ ಕೊರೊನಾ ವೈರಸ್ ಸೋಂಕು ಹರಡುವಿಕೆ ದಿನೇದಿನೇ ಹೆಚ್ಚುತ್ತಿದ್ದು, ಮಹಾರಾಷ್ಟ್ರದಲ್ಲಿ 4878 ಹೊಸ ಪ್ರಕರಣಗಳು ಮಂಗಳವಾರ ಪತ್ತೆಯಾಗಿದೆ. 245 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 174761 ತಲುಪಿದೆ. ಸದ್ಯ 75979 ಸಕ್ರಿಯ ಪ್ರಕರಣಗಳಿವೆ.

ಮಹಾರಾಷ್ಟ್ರದಲ್ಲಿ ಈವರೆಗೆ 4,861 ಪೊಲೀಸರಿಗೆ ಸೋಂಕು ತಗುಲಿದೆ. ಈ ಪೈಕಿ 3699 ಮಂದಿ ಗುಣಮುಖರಾಗಿದ್ದಾರೆ. 59 ಮಂದಿ ಮೃತಪಟ್ಟಿದ್ದಾರೆ. ಧಾರಾವಿಯಲ್ಲಿ 6 ಪ್ರಕರಣ ಇಂದು ಪತ್ತೆಯಾಗಿದೆ.

ತಮಿಳುನಾಡಿನಲ್ಲಿ ಒಂದೇ ದಿನ 3943 ಪ್ರಕರಣಗಳು ದೃಢಪಟ್ಟಿವೆ. 60 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಇದರೊಂದಿಗೆ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 90167ಕ್ಕೆ ತಲುಪಿದ್ದು, ಈವರೆಗೆ 1201 ಜನ ಮೃತಪಟ್ಟಿದ್ದಾರೆ. 38889 ಸಕ್ರಿಯ ಪ್ರಕರಣಗಳಿವೆ.

ಇದನ್ನೂ ಓದಿ: 

ಕೇರಳದಲ್ಲಿ 131 ಹೊಸ ಪ್ರಕರಣಗಳು ಪತ್ತೆಯಾಗಿವೆ. ಸದ್ಯ 2112 ಸಕ್ರಿಯ ಪ್ರಕರಣಗಳಿವೆ. 2304 ಮಂದಿ ಈವರೆಗೆ ಚೇತರಿಸಿಕೊಂಡಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.

ಹಿಮಾಚಲ ಪ್ರದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 948ಕ್ಕೆ ಏರಿಕೆಯಾಗಿದೆ. ಸದ್ಯ 358 ಸಕ್ರಿಯ ಪ್ರಕರಣಗಳಿವೆ. ಗುಜರಾತ್‌ನಲ್ಲಿ 620 ಹೊಸ ಪ್ರಕರಣ 20 ಸಾವು; ಪಶ್ಚಿಮ ಬಂಗಾಳದಲ್ಲಿ 652 ಹೊಸ ಪ್ರಕರಣ ಹಾಗೂ 15 ಸಾವು ಸಂಭವಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು