ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇರಾನ್‌ನಲ್ಲಿ ಕೊರೊನಾ: ತವರಿಗೆ ಮರಳಲು ಬಯಸುವ ಭಾರತೀಯರಿಗೆ ಅಧಿಕಾರಿಗಳ ಸಹಾಯ ಹಸ್ತ

Last Updated 1 ಮಾರ್ಚ್ 2020, 2:59 IST
ಅಕ್ಷರ ಗಾತ್ರ

ನವದೆಹಲಿ: ಇರಾನ್‌ನಲ್ಲಿ ಕೊರೊನಾ ವೈರಸ್ ಸೋಂಕು ವ್ಯಾಪಕವಾದ ಹಿನ್ನೆಲೆಯಲ್ಲಿ ತವರಿಗೆಮರಳಲು ಬಯಸುವ ಭಾರತೀಯರಿಗೆ ಅಧಿಕಾರಿಗಳು ಸಹಾಯ ಮಾಡಲಿದ್ದಾರೆ ಎಂದು ಇರಾನ್‌ನ ಭಾರತೀಯ ರಾಯಭಾರಿ ಗದ್ದಮ್‌ ಧರ್ಮೇಂದ್ರ ಶನಿವಾರ ತಿಳಿಸಿದ್ದಾರೆ.

ಇದಕ್ಕಾಗಿ ವ್ಯವಸ್ಥೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಯುತ್ತಿದೆ ಎಂದಿದ್ದಾರೆ.

ಮಾರಣಾಂತಿಕ ಕೊರೊನಾ ವೈರಸ್‌ ಸೋಂಕಿನ ಪರಿಣಾಮ ಇರಾನ್‌ನಲ್ಲಿ ಸುಮಾರು 43 ಜನರು ಮೃತಪಟ್ಟಿದ್ದಾರೆ.

‘ಕೊರೊನಾ ವೈರಸ್‌ ಸೋಂಕಿನ ಭೀತಿಯಿಂದ ತವರಿಗೆಮರಳಲು ಬಯಸುವ ಭಾರತೀಯರಿಗೆ ಅನುಕೂಲವಾಗುವಂತೆ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಇದಕ್ಕಾಗಿ ವ್ಯವಸ್ಥೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆಗಳು ನಡೆಯುತ್ತಿವೆ’ ಎಂದು ಧರ್ಮೇಂದ್ರ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT