ಗುರುವಾರ , ಜೂನ್ 4, 2020
27 °C

ಫಲಿಸಿದೆ 3T ಸೂತ್ರ, ದೇಶದಲ್ಲೇ 13ನೇ ಸ್ಥಾನದಲ್ಲಿ ಕರ್ನಾಟಕ: ಸಚಿವ ಸುಧಾಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 'ತ್ರೀ ಟಿ' ಕಾರ್ಯತಂತ್ರ ವೈದ್ಯರ ಪರಿಶ್ರಮದಿಂದ ಕರ್ನಾಟಕದಲ್ಲಿ ಕೊರೊನಾ ಸೋಂಕು ಕಡಿಮೆ ಪ್ರಮಾಣದಲ್ಲಿದ್ದು ರಾಷ್ಟ್ರದಲ್ಲಿಯೇ 13 ನೇ ಸ್ಥಾನದಲ್ಲಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಟ್ರೇಸಿಂಗ್, ಟೆಸ್ಟಿಂಗ್ ಮತ್ತು ಟ್ರೀಟ್‌‌ಮೆಂಟ್ (ಪತ್ತೆಹಚ್ಚುವಿಕೆ, ಪರೀಕ್ಷೆ ಮತ್ತು ಚಿಕಿತ್ಸೆ) ಮೂರು ವಿಧಾನಗಳನ್ನು ಅನುಸರಿಸುತ್ತಿರುವ ಸಾವಿರಾರು ಮಂದಿ ವೈದ್ಯರ ಕಠಿಣ ಪರಿಶ್ರಮ ಮತ್ತು ನಿಖರವಾದ ಯೋಜನೆಯಿಂದ ಇದು ಸಾಧ್ಯವಾಗುತ್ತಿದೆ. ಇದರಿಂದಾಗಿ ಕೋವಿಡ್19 ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತಿದೆ. ಇದು ದೇಶದಲ್ಲಿಯೇ ಕರ್ನಾಟಕ 13ನೇ ಸ್ಥಾನದಲ್ಲಿರಲು ಸಾಧ್ಯವಾಗಿಸಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು