ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಂಜಾನ್ ಪ್ರಾರ್ಥನೆಗೆ ಗುಂಪುಗೂಡದಂತೆ ಎಚ್ಚರ ವಹಿಸಲು ರಾಜ್ಯಗಳಿಗೆ ಕೇಂದ್ರ ಸೂಚನೆ

Last Updated 21 ಏಪ್ರಿಲ್ 2020, 14:37 IST
ಅಕ್ಷರ ಗಾತ್ರ

ನವದೆಹಲಿ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ರಂಜಾನ್‌ ಸಂದರ್ಭದಲ್ಲಿ ಪ್ರಾರ್ಥನೆಗೆ ಗುಂಪುಗೂಡದಂತೆ ಎಚ್ಚರ ವಹಿಸುವಂತೆ ರಾಜ್ಯಗಳಿಗೆ ಹಾಗೂ ಕೇಂದ್ರಾಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.

‘ರಂಜಾನ್‌ ಸಂದರ್ಭದಲ್ಲಿ ಮನೆಯಲ್ಲಿಯೇ ಇರುವಂತೆ ತಮ್ಮ ಅನುಯಾಯಿಗಳಿಗೆ ಸೂಚಿಸಲು ಮುಸ್ಲಿಂ ಮುಖಂಡರಿಗೆ ಹೇಳಬೇಕು’ ಎಂದು ರಾಜ್ಯಗಳಿಗೆ ನಿರ್ದೇಶಿಸಿದೆ.

‘ಯಾವುದೇ ಧಾರ್ಮಿಕ ಸ್ಥಳಗಳಲ್ಲಿ ಗುಂಪು ಸೇರುವುದನ್ನು ಲಾಕ್‌ಡೌನ್‌ ಅವಧಿಯಲ್ಲಿ ನಿಷೇಧಿಸಲಾಗಿದೆ. ಇದನ್ನು ಎಲ್ಲರೂ ಪಾಲಿಸುವ ಭರವಸೆ ಇದೆ. ಮಸೀದಿಗಳಲ್ಲಿ ಪ್ರಾರ್ಥನೆಗಾಗಿ ಸೇರದೆ ಎಲ್ಲರೂ ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆ ನಡೆಸಬೇಕು ಎಂದು ಮುಸ್ಲಿಂ ಮುಖಂಡರಿಗೆ ಸೂಚಿಸಲು ರಾಜ್ಯಗಳಿಗೆ ನಿರ್ದೇಶಿಸಲಾಗಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಂಜಾನ್‌ ಸಂದರ್ಭದಲ್ಲಿ ಸಂಜೆಯ ಪ್ರಾರ್ಥನೆ ಸಲ್ಲಿಸಲು ಮಸೀದಿಗಳಲ್ಲಿ ಜನ ಗುಂಪುಸೇರುವ ಮುನ್ಸೂಚನೆ ಹಿನ್ನೆಲೆಯಲ್ಲಿ ಈ ನಿರ್ದೇಶನ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT