ಶನಿವಾರ, ಜೂನ್ 6, 2020
27 °C

ಆಗಸ್ಟ್‌ಗೂ ಮುನ್ನ ಅಂತರರಾಷ್ಟ್ರೀಯ ವಿಮಾನ ಹಾರಾಟ ಪುನರಾರಂಭ: ಸಚಿವ ಪುರಿ

ಪಿಟಿಐ Updated:

ಅಕ್ಷರ ಗಾತ್ರ : | |

 Civil Aviation Minister Hardeep Singh Puri

ನವದೆಹಲಿ: ಆಗಸ್ಟ್ ತಿಂಗಳಿಗೂ ಮುನ್ನ ಹೆಚ್ಚಿನ ಸಂಖ್ಯೆಯಲ್ಲಿ ಅಂತರರಾಷ್ಟ್ರೀಯ ವಿಮಾನ ಹಾರಾಟ ಆರಂಭಿಸಲು ಭಾರತ ಪ್ರಯತ್ನಿಸಲಿದೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್‌ದೀಪ್ ಸಿಂಗ್ ಪುರಿ ಶನಿವಾರ ಹೇಳಿದ್ದಾರೆ. ಮೇ 25ರಿಂದ ದೇಶೀಯ ವಿಮಾನ ಹಾರಾಟ ಆರಂಭಿಸಲಾಗುವುದು ಎಂದು ಮೂರು ದಿನಗಳ ಹಿಂದಷ್ಟೇ ಅವರು ಘೋಷಿಸಿದ್ದರು.

‘ಆಗಸ್ಟ್‌ ಅಥವಾ ಸೆಪ್ಟೆಂಬರ್ ಒಳಗೆ ಅಂತರರಾಷ್ಟ್ರೀಯ ವಿಮಾನ ಹಾರಾಟ ಪುನರಾರಂಭಿಸುವ ಬಗ್ಗೆ ಪೂರ್ಣ ಭರವಸೆಯಿದೆ. ಪೂರ್ಣ ಪ್ರಮಾಣದಲ್ಲಿ ಅಲ್ಲದಿದ್ದರೂ ಹೆಚ್ಚಿನ ಸಂಖ್ಯೆಯಲ್ಲಿ ಆರಂಭವಾಗಲಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವಿಮಾನ ಪ್ರಯಾಣಕ್ಕೆ ಮಾರ್ಗಸೂಚಿ ಪ್ರಕಟಿಸಿದ ಎಎಐ: ಆರೋಗ್ಯ ಸೇತು ಆ್ಯಪ್‌ ಕಡ್ಡಾಯ

‘ಯಾವ ದಿನ ಎಂಬುದನ್ನು ಈಗಲೇ ಖಚಿತವಾಗಿ ಹೇಳಲಾಗದು. ಪರಿಸ್ಥಿತಿ ನೋಡಿಕೊಂಡು ಆರಂಭಿಸಲಾಗುವುದು’ ಎಂದು ಅವರು ಹೇಳಿದ್ದಾರೆ.

ಕೊರೊನಾ ವೈರಸ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ದೇಶದಾದ್ಯಂತ ಲಾಕ್‌ಡೌನ್ ಘೋಷಿಸಿದ್ದ ಹಿನ್ನೆಲೆಯಲ್ಲಿ ಮಾರ್ಚ್‌ 25ರಿಂದ ದೇಶದಲ್ಲಿ ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿತ್ತು.

ಇದನ್ನೂ ಓದಿ: ಮೇ 25ರಿಂದ ದೇಶೀಯ ವಿಮಾನ ಹಾರಾಟ ಪ್ರಾರಂಭ: ವಿಮಾನಯಾನ ಸಚಿವಾಲಯ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು