ಶನಿವಾರ, ಜೂಲೈ 4, 2020
24 °C

ಕೊರೊನಾ: ಜೂನ್ 30ರ ವರೆಗೆ ಲಾಕ್‌ಡೌನ್‌ ವಿಸ್ತರಿಸಿದ ಮಹಾರಾಷ್ಟ್ರ

ಪಿಟಿಐ Updated:

ಅಕ್ಷರ ಗಾತ್ರ : | |

Coronavirus

ಮುಂಬೈ: ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರವು ರಾಜ್ಯದಾದ್ಯಂತ ಜೂನ್ 30ರ ವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಿದೆ. ಹಂತಹಂತವಾಗಿ ನಿರ್ಬಂಧಗಳನ್ನು ಸಡಿಲಿಸಲಾಗುವುದು ಎಂದು ತಿಳಿಸಿದೆ.

‘ಮಿಷನ್ ಬಿಗಿನ್ ಅಗೈನ್’ ಘೋಷಣೆಯಡಿ ಪರಿಷ್ಕೃತ ಮಾರ್ಗಸೂಚಿಯನ್ನು ಭಾನುವಾರ ಬಿಡುಗಡೆ ಮಾಡಲಾಗಿದ್ದು, ಜೂನ್‌ 5ರಿಂದ ಮಾಲ್‌ಗಳನ್ನು ಹೊರತುಪಡಿಸಿ ಅಂಗಡಿಗಳು, ಮಾರುಕಟ್ಟೆಗಳ ಕಾರ್ಯಾಚರಣೆಗೆ ಸಮ–ಬೆಸ ಆಧಾರದಲ್ಲಿ ಅನುಮತಿ ನೀಡಲಾಗುವುದು ಎಂದು ತಿಳಿಸಲಾಗಿದೆ.

ಖಾಸಗಿ ಕಚೇರಿಗಳು ಜೂನ್‌ 8ರಿಂದ ಶೇ 10ರಷ್ಟು ಉದ್ಯೋಗಿಗಳನ್ನು ಕಚೇರಿಗೆ ರಕರೆಸಿಕೊಳ್ಳಬಹುದಾಗಿದೆ. ಉಳಿದ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಲು ಸೂಚಿಸಲಾಗಿದೆ.

ಇದನ್ನೂ ಓದಿ: 

ಆದರೆ ಕಂಟೈನ್‌ಮೆಂಟ್ ವಲಯಗಳನ್ನು ಈ ವಿನಾಯಿತಿಗಳಿಂದ ಹೊರಗಿಡಲಾಗಿದೆ. ಹೊರಾಂಗಣ ದೈಹಿಕ ಚಟುವಟಿಕೆಗಳು, ಬೆಳಿಗ್ಗಿನ ವಾಯುವಿಹಾರ, ಸೈಕ್ಲಿಂಗ್‌ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ. ಪ್ಲಂಬರ್‌, ಎಲೆಕ್ಟ್ರೀಷಿಯನ್‌ಗಳು ಮತ್ತಿತರ ಸ್ವ ಉದ್ಯೋಗಿಗಳಿಗೆ ಲಾಕ್‌ಡೌನ್‌ನಿಂದ ವಿನಾಯಿತಿ ನೀಡಲಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಮಹಾರಾಷ್ಟ್ರದಲ್ಲಿ ಭಾನುವಾರ ಬೆಳಿಗ್ಗೆಯ ವರೆಗೆ ಒಟ್ಟು 65,168 ಪ್ರಕರಣಗಳು ಬೆಳಕಿಗೆ ಬಂದಿದ್ದು, 2,197 ಜನರು ಮೃತರಾಗಿದ್ದಾರೆ. 34,890 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದ್ದು, 28,081 ಮಂದಿ ಗುಣಮುಖರಾಗಿದ್ದಾರೆ. ದೇಶದಾದ್ಯಂತ ಸೋಂಕಿತರ ಸಂಖ್ಯೆ 1,82,143ಕ್ಕೆ ಏರಿಕೆಯಾಗಿದೆ. 5,164 ಜನರು ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು