ಸೋಮವಾರ, ಮೇ 25, 2020
27 °C

ಕೋವಿಡ್ ಸವಾಲು: ವಿಪಕ್ಷದ ನಾಯಕರು, ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಮೋದಿ ಚರ್ಚೆ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Narendra Modi

ನವದೆಹಲಿ: ಕೋವಿಡ್ -19 ರೋಗ ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಈ ಸವಾಲನ್ನು ಎದುರಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ರಾಜಕೀಯ ನಾಯಕರ ಜತೆ ಚರ್ಚೆ ನಡೆಸಿದ್ದಾರೆ.

ಕೋವಿಡ್-19 ಸವಾಲಿನ ಬಗ್ಗೆ ಕೆಲವು ದಿನಗಳ ಹಿಂದೆಯಷ್ಟೇ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಮೋದಿಯವರಿಗೆ ಪತ್ರ ಬರೆದಿದ್ದರು. ಸೋನಿಯಾ ಗಾಂಧಿ ಸೇರಿದಂತೆ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತ್ತು ಪ್ರತಿಭಾ ಪಾಟೀಲ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ದೇವೇಗೌಡರ ಜತೆ ಮೋದಿ ಕೋವಿಡ್-19 ಬಗ್ಗೆ ಚರ್ಚೆ ಮಾಡಿದ್ದಾರೆ. 

ಅದೇ ವೇಳೆ ಉತ್ತರ ಮತ್ತು ದಕ್ಷಿಣ  ಭಾರತದ ರಾಜಕೀಯ ನಾಯಕರೊಂದಿಗೂ ಪ್ರಧಾನಿ ಚರ್ಚೆ ನಡೆಸಿದ್ದಾರೆ.

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್  ಅವರ ಪುತ್ರ ಅಖಿಲೇಶ್ ಸಿಂಗ್ ಯಾದವ್ ಪಂಜಾಬ್‌ನ ಪ್ರಕಾಶ್ ಸಿಂಗ್ ಬಾದಲ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಒಡಿಶಾದ ನವೀನ್ ಪಟ್ನಾಯಿಕ್, ತೆಲಂಗಾಣದ ಕೆ.ಚಂದ್ರಶೇಖರ್ ರಾವ್  ಮತ್ತು ಡಿಎಂಕೆ ನಾಯಕ ಎಂ,ಕೆ ಸ್ಟಾಲಿನ್ ಜತೆ ಮೋದಿ ಮಾತುಕತೆ ನಡೆಸಿದ್ದಾರೆ.

ದೇಶದಲ್ಲಿ ಕೋವಿಡ್-19 ರೋಗ ನಿಯಂತ್ರಣಕ್ಕಾಗಿ ಸರ್ಕಾರ ವಿಪಕ್ಷಗಳ ಮಾತು ಆಲಿಸಿಲ್ಲ ಎಂಬ ಆಕ್ಷೇಪವೂ ಮೋದಿ ಸರ್ಕಾರದ ಮೇಲಿದೆ. ಈ ಹಿನ್ನಲೆಯಲ್ಲಿ ಹಿರಿಯ ರಾಜಕಾರಣಿಗಳ ಜತೆ ಮೋದಿ ಮಾತುಕತೆ ಕೋವಿಡ್-19 ವಿರುದ್ಧದ ಹೋರಾಟಕ್ಕೆ ಬಲ ತುಂಬಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು