ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

COVID-19 UPDATES | ದೇಶದಲ್ಲಿ ಕೊರೊನಾ ಪ್ರಕರಣ 1117ಕ್ಕೆ ಏರಿಕೆ, 33 ಜನ ಸಾವು

Last Updated 31 ಮಾರ್ಚ್ 2020, 4:54 IST
ಅಕ್ಷರ ಗಾತ್ರ

ನವದೆಹಲಿ:ದೇಶದಲ್ಲಿ ಕೋವಿಡ್‌–19 ಪ್ರಕರಣಗಳ ಸಂಖ್ಯೆ 1117ಕ್ಕೆ ಏರಿದ್ದು ಕೊರೊನಾ ವೈರಸ್‌ ಸೋಂಕಿನಿಂದ ಈವರೆಗೆ 33 ಜನರು ಮೃತಪಟ್ಟಿದ್ದಾರೆ.

ಕೇರಳದಲ್ಲಿ ಮಂಗಳವಾರ ಒಬ್ಬ ವ್ಯಕ್ತಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಕೇರಳದಲ್ಲಿ ಇಲ್ಲಿಯವರೆಗೂ ಇಬ್ಬರು ಬಲಿಯಾಗಿದ್ದಾರೆ.

ಸೋಮವಾರ ಒಂದೇ ದಿನ 227 ಹೊಸ ಪ್ರಕರಣಗಳು ದಾಖಲಾಗಿದ್ದು 11 ಜನರು ಮೃತಪಟ್ಟಿದ್ದಾರೆ. ಇಲ್ಲಿಯವರೆಗೂ 102 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೇರಳ, ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಚೀನಾದ ವುಹಾನ್‌ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ ಕೊರೊನಾ ವೈರಸ್ ಸೋಂಕು, ಇದುವರೆಗೂ 200ಕ್ಕೂ ಹೆಚ್ಚು ದೇಶಗಳಿಗೆ ವ್ಯಾಪಿಸಿದ್ದಲ್ಲದೆ 7 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. ಕೋವಿಡ್-19ಗೆ ಜಾಗತಿಕವಾಗಿ 35 ಸಾವಿರಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT