ಬುಧವಾರ, ಮೇ 27, 2020
27 °C

ಕೊರೊನಾ: ದೇಶದಾದ್ಯಂತ ಸೋಂಕಿತರ ಸಂಖ್ಯೆ 1,234, ಮೃತರ ಸಂಖ್ಯೆ 34ಕ್ಕೆ ಏರಿಕೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕೊರೊನಾ ವೈರಸ್ ಸೋಂಕು (ಕೋವಿಡ್–19) ಪೀಡಿತರ ಸಂಖ್ಯೆ ದೇಶದಲ್ಲಿ 1,234 ತಲುಪಿದ್ದು, ಈವರೆಗೆ 34 ಜನ ಮೃತಪಟ್ಟಿದ್ದಾರೆ.

ಪಂಜಾಬ್‌ನಲ್ಲಿ ಸೋಂಕಿನಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಸತ್ತವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಕರ್ನಾಟಕದ ಮೈಸೂರು ಜಿಲ್ಲೆಯಲ್ಲಿ ಸೋಮವಾರ ಮತ್ತೆ ನಾಲ್ಕು ‘ಕೋವಿಡ್‌–19’ ಪ್ರಕರಣಗಳು ದೃಢಪಟ್ಟಿವೆ. ಈ ಮಧ್ಯೆ, ಲಾಕ್‌ಡೌನ್‌ ಅವಧಿ ವಿಸ್ತರಣೆಯಾಗದೇ ಇರಬೇಕಾದರೆ ನಾಗರಿಕರು ಅದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಕೇರಳದಲ್ಲಿ 32 ಕೋವಿಡ್–19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 213 ತಲುಪಿದೆ. ಈ ಪೈಕಿ, ಕಾಸರ‌ಗೋಡು ಜಿಲ್ಲೆಯೊಂದರಲ್ಲೇ 17 ಪ್ರಕರಣ ದೃಢಪಟ್ಟಿದೆ. ಮಾರ್ಚ್‌ 16ರಂದು ಕಾಸರಗೋಡು ಜಿಲ್ಲೆಯಲ್ಲಿ ಮೊದಲ ಕೋವಿಡ್‌–19 ಪ್ರಕರಣ ದೃಢಪಟ್ಟಿತ್ತು. ಆ ಬಳಿಕ ಸೋಂಕು ತಗುಲಿರುವವರ ಸಂಖ್ಯೆ ಏರುತ್ತಲೇ ಇದೆ. ಶುಕ್ರವಾರ ಒಂದೇ ದಿನ 34 ಮಂದಿಯಲ್ಲಿ ಸೋಂಕು ದೃಢಪಟ್ಟಿತ್ತು. ಈಗ ಮತ್ತೆ ದೊಡ್ಡ ಸಂಖ್ಯೆಯಲ್ಲಿ ಹೊಸ ಪ್ರಕರಣಗಳ ವರದಿಗಳು ಲಭಿಸಿವೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ಕೋವಿಡ್‌–19ರ ಏಳು ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 45ಕ್ಕೆ ಏರಿಕೆಯಾಗಿದೆ. ಅಂಡಮಾನ್ ನಿಕೋಬಾರ್‌ನಲ್ಲಿಯೂ ಒಂದು ಕೊರೊನಾ ಪ್ರಕರಣ ದೃಢಪಟ್ಟಿದೆ.

ಈ ಮಧ್ಯೆ, ದೇಶದಲ್ಲಿ ಕೊರೊನಾ ಈಗಲೂ ಸ್ಥಳೀಯ ಹರಡುವಿಕೆ ಹಂತದಲ್ಲಿ ಇದೆಯಷ್ಟೆ, ಸಮುದಾಯಕ್ಕೆ ಹರಡಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕೊರೊನಾ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತೀ ಅಗತ್ಯ. ಕೇವಲ ಒಬ್ಬ ವ್ಯಕ್ತಿಯ ನಿರ್ಲಕ್ಷ್ಯವೂ ಸೋಂಕು ಹರಡಲು ಕಾರಣವಾಗಬಹುದು ಎಂದೂ ಇಲಾಖೆ ಹೇಳಿದೆ. ಲಾಕ್‌ಡೌನ್ ವಿಸ್ತರಿಸುವ ಆಲೋಚನೆಯಿಲ್ಲ ಎಂದೂ ಕೇಂದ್ರ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು