ನವದೆಹಲಿ: ದೇಶದಾದ್ಯಂತ ಮಂಗಳವಾರ ಬೆಳಿಗ್ಗೆಯಿಂದ 384 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 18,985ಕ್ಕೆ ಏರಿಕೆಯಾಗಿದೆ.

ಸೋಂಕಿತರ ಪೈಕಿ ಈವರೆಗೆ 603 ಮಂದಿ ಮೃತಪಟ್ಟಿದ್ದು, 3,260 ಜನ ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸಂಜೆ 5 ಗಂಟೆಗೆ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಈವರೆಗೆ ಅತಿ ಹೆಚ್ಚು 4669 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಸೋಂಕಿನಿಂದ ಈಗಾಗಲೇ 232 ಮಂದಿ ಸಾವಿಗೀಡಾಗಿದ್ದಾರೆ. ದೇಶದಲ್ಲಿ ಅತಿ ಹೆಚ್ಚು ಸಾವು ಕೂಡಾ ಮಹಾರಾಷ್ಟ್ರದಲ್ಲೇ ದಾಖಲಾಗಿದೆ. ದೆಹಲಿಯಲ್ಲಿ ಒಟ್ಟು 2081 ಪ್ರಕರಣಗಳು, 47 ಮಂದಿ ಸಾವು; ತಮಿಳುನಾಡಿನಲ್ಲಿ 1520 ಪ್ರಕರಣಗಳು, 17 ಮಂದಿ ಸಾವು; ರಾಜಸ್ಥಾನದಲ್ಲಿ 1576 ಪ್ರಕರಣಗಳು, 25 ಸಾವು ಸಂಭವಿಸಿದೆ.

ಕರ್ನಾಟಕದಲ್ಲಿ ಸೋಮವಾರ ಸಂಜೆ 5 ಗಂಟೆಯಿಂದ ಮಂಗಳವಾರ ಸಂಜೆ 5 ಗಂಟೆಯ ಅವಧಿಯಲ್ಲಿ 10 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಇದನ್ನೂ ಓದಿ:ಇಂದು 10 ಕೊರೊನಾ ಪ್ರಕರಣ ದೃಢ: ಸೋಂಕಿತರ ಸಂಖ್ಯೆ 418, ಬಿಡುಗಡೆಯಾದವರು 129 ಜನ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.