ಮಂಗಳವಾರ, ಏಪ್ರಿಲ್ 7, 2020
19 °C

ಕೊರೊನಾ ವೈರಸ್: ದೇಶದಲ್ಲಿ ಮೃತರ ಸಂಖ್ಯೆ 19, ಸೋಂಕು ಪೀಡಿತರು 740ಕ್ಕೆ ಏರಿಕೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಾದ್ಯಂತ ಕೊರೊನಾ ವೈರಸ್ (ಕೋವಿಡ್–19) ಸೊಂಕಿಗೆ ಮೃತಪಟ್ಟವರ ಸಂಖ್ಯೆ ಶುಕ್ರವಾರ ಮಧ್ಯಾಹ್ನದ ವೇಳೆಗೆ 19ಕ್ಕೆ ಏರಿಕೆಯಾಗಿದೆ. ಸೋಂಕು ಪೀಡಿತರ ಸಂಖ್ಯೆ 740 ತಲುಪಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಕಿಅಂಶಗಳಿಂದ ತಿಳಿದುಬಂದಿದೆ.

ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ವೈರಸ್ ಸೋಂಕಿಗೆ ವ್ಯಕ್ತಿ ಬಲಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮಾಹಿತಿ ನೀಡಿದ್ದಾರೆ

ಇದನ್ನೂ ಓದಿ: ತುಮಕೂರಿನಲ್ಲಿ ಕೋವಿಡ್-19ಗೆ ಮೊದಲ ಬಲಿ: ರಾಜ್ಯದಲ್ಲಿ ಮೃತರ ಸಂಖ್ಯೆ ಮೂರಕ್ಕೇರಿಕೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು ಹೊಸದಾಗಿ 3 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕುಪೀಡಿತರ ಒಟ್ಟು ಸಂಖ್ಯೆ 39 ತಲುಪಿದೆ. ಆಂಧ್ರ ಪ್ರದೇಶದಲ್ಲಿ ಒಂದು ಕೋವಿಡ್ ಪ್ರಕರಣ ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕುಪೀಡಿತರ ಒಟ್ಟು ಸಂಖ್ಯೆ 12 ಆಗಿದೆ. ತಮಿಳುನಾಡಿನಲ್ಲಿ ಹೊಸದಾಗಿ 6 ಪ್ರಕರಣಗಳು ದೃಢಪಟ್ಟಿವೆ.

ತೆಲಂಗಾಣ ಮತ್ತು ಒಡಿಶಾಗಳಲ್ಲಿ ಇಂದು ತಲಾ ಒಂದು ಪ್ರಕರಣ ದೃಢಪಟ್ಟಿದೆ. ಒಡಿಶಾದ ಭುವನೇಶ್ವರದಲ್ಲಿ 60 ವರ್ಷ ವಯಸ್ಸಿನ ವೃದ್ಧರೊಬ್ಬರಿಗೆ ಸೋಂಕು ತಗುಲಿರುವುದು ಖಚಿತಪಟ್ಟಿದೆ. ತೆಲಂಗಾಣದ 45 ವರ್ಷ ವಯಸ್ಸಿನ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದು, ಒಟ್ಟಾರೆಯಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 45 ಆಗಿದೆ.

ಈ ಮಧ್ಯೆ, ಮಹಾರಾಷ್ಟ್ರದ ಪುಣೆ ಬಳಿಯ ಪಿಂಪ್ರಿ–ಚಿಂಚ್‌ವಾಡ್‌ನಲ್ಲಿ ಕೊರೊನಾ ಶಂಕೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮೂವರಿಗೆ ಸೋಂಕು ತಗುಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈವರೆಗೆ ಪುಣೆಯಲ್ಲಿ 32 ಜನರಲ್ಲಿ ಕೊರೊನಾ ದೃಢಪಟ್ಟಿದ್ದು, ಆ ಪೈಕಿ 5 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಇದನ್ನೂ ಓದಿ: 

ಮಹಾರಾಷ್ಟ್ರದಲ್ಲಿ ಕೊರೊನಾದಿಂದಾಗಿ ಈವರೆಗೆ 5 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಸೋಂಕು ಪ್ರಕರಣಗಳ ಏರಿಕೆ ದರ ಸ್ಥಿರವಾಗಿದೆ. ದೇಶದಲ್ಲಿ ಸೋಂಕು ಈಗಲೂ ಎರಡನೇ ಹಂತದಲ್ಲಿಯೇ ಇದೆ ಎಂದು ಕೇಂದ್ರ ಸರ್ಕಾರ ಪ್ರತಿಪಾದಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು