ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್-19: ಭಾರತದಲ್ಲಿ ರೋಗಿಗಳ ಸಂಖ್ಯೆ 148ಕ್ಕೆ ಏರಿಕೆ

Last Updated 18 ಮಾರ್ಚ್ 2020, 6:33 IST
ಅಕ್ಷರ ಗಾತ್ರ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಕೋವಿಡ್ -19 ಸೋಂಕು ತಗಲಿರುವ ಪ್ರಕರಣವೊಂದು ಪತ್ತೆಯಾಗಿದೆ. ಬಂಗಾಳದಲ್ಲಿ ಪತ್ತೆಯಾದ ಮೊದಲ ಪ್ರಕರಣ ಇದಾಗಿದೆ. ಪುಣೆಯಲ್ಲಿರುವ ವ್ಯಕ್ತಿಯೊಬ್ಬರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು ಮಹಾರಾಷ್ಟ್ರದಲ್ಲಿ ಪ್ರಕರಣಗಳ ಸಂಖ್ಯೆ 42ಕ್ಕೇರಿದೆ. ಇಲ್ಲಿಯವರೆಗೆ ಭಾರತದಲ್ಲಿ ಸೋಂಕಿತರ ಸಂಖ್ಯೆ 148 ತಲುಪಿದೆ.

ಪುಣೆಯಲ್ಲಿ ವ್ಯಕ್ತಿಯೊಬ್ಬರಿಗೆ ಸೋಂಕು
ಪುಣೆಯಲ್ಲಿ ವ್ಯಕ್ತಿಯೊಬ್ಬರಿಗೆ ಕೋವಿಡ್-19 ಇರುವುದು ದೃಢಪಟ್ಟಿದೆ. ಫ್ರಾನ್ಸ್ ಮತ್ತು ನೆದರ್‌ಲೆಂಡ್‌ಗೆ ಪ್ರಯಾಣಿಸಿ ಮರಳಿದ ವ್ಯಕ್ತಿಯಾಗಿದ್ದಾರೆ ಇವರು. ಕೋವಿಡ್-19 ದೃಢಪಟ್ಟಿರುವ 18 ಪ್ರಕರಣಗಳು ದಾಖಲಾಗಿದ್ದುಮಹಾರಾಷ್ಟ್ರದಲ್ಲಿ ರೋಗಿಗಳ ಸಂಖ್ಯೆ 42ಕ್ಕೇರಿದೆ.

ಕೋಲ್ಕತ್ತದಲ್ಲಿ ಮೊದಲ ಪ್ರಕರಣ
ಪಶ್ಚಿಮ ಬಂಗಾಳದಲ್ಲಿ ವ್ಯಕ್ತಿಯೊಬ್ಬರಿಗೆ ಸೋಂಕು ತಗಲಿರುವುದು ಮಂಗಳವಾರ ರಾತ್ರಿ ಪತ್ತೆಯಾಗಿದೆ. ಇಂಗ್ಲೆಂಡ್‌ಗೆ ಹೋಗಿ ಬಂದ ದಕ್ಷಿಣ ಕೋಲ್ಕತ್ತ ನಿವಾಸಿಯಾಗಿರುವ ಆ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಮೆರಿಕ ಚುನಾವಣೆ ಮುಂದೂಡುವ ಅಗತ್ಯವಿಲ್ಲ- ಟ್ರಂಪ್
ಕೊರೊನಾ ವೈರಸ್ ಭೀತಿಯಿಂದ ಅಮೆರಿಕದಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆ ಮುಂದೂಡುವ ಅಗತ್ಯವಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT