ಗುರುವಾರ , ಏಪ್ರಿಲ್ 2, 2020
19 °C

ಕೋವಿಡ್‌–19 ಭೀತಿ: ಹೋಳಿಯಿಂದ ದೂರ ಉಳಿದ ಮೋದಿ, ಶಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್‌–19 ವೈರಸ್‌ ಭೀತಿ ವ್ಯಾಪಕವಾಗಿರುವುದರಿಂದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ.ನಡ್ಡಾ ಹೋಳಿ ಸಮಾರಂಭದಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ.

‘ಕೋವಿಡ್‌–19 ಹರಡುವ ಸಂಭವ ಇರುವುದರಿಂದ ಜನರು ಗುಂಪು ಸೇರುವುದನ್ನು ಕಡಿಮೆ ಮಾಡುವಂತೆ ತಜ್ಞರು ಸಲಹೆ ನೀಡಿದ್ದಾರೆ. ಹೀಗಾಗಿ ಸಮಾರಂಭದಲ್ಲಿ ಭಾಗವಹಿಸುತ್ತಿಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 

‘ಭಾರತೀಯರಿಗೆ ಹೋಳಿ ಬಹುಮುಖ್ಯವಾದ ಹಬ್ಬ. ಆದರೆ, ಈ ಬಾರಿ ನಾನು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಸಾರ್ವಜನಿಕರು ಸಭೆ, ಸಮಾರಂಭಗಳಲ್ಲಿ ಭಾಗವಹಿಸುವುದನ್ನು ಕಡಿಮೆ ಮಾಡಬೇಕು. ನಿಮ್ಮ ಮತ್ತು ಕುಟುಂಬದ ಆರೋಗ್ಯದ ಗಮನ ನೀಡಿ’ ಎಂದು ಸಲಹೆ ನೀಡಿ ಅಮಿತ್‌ ಶಾ ಅವರು ಟ್ವೀಟ್‌ ಮಾಡಿದ್ದಾರೆ.

ದೆಹಲಿ ಹಿಂಸಾಚಾರ–ಸಮಾರಂಭದಲ್ಲಿ ಪಾಲ್ಗೊಳ್ಳದ ಎಎಪಿ: ಹಿಂಸಾಚಾರದಿಂದ ಈಶಾನ್ಯ ದೆಹಲಿ ನಲುಗಿರುವ ಹಿನ್ನೆಲೆಯಲ್ಲಿ ಹೋಳಿ ಸಮಾರಂಭದಲ್ಲಿ ಪಾಲ್ಗೊಳ್ಳದಿರಲು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಪಕ್ಷದ ಮುಖಂಡರು ನಿರ್ಧರಿಸಿದ್ದಾರೆ.  

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು