ಶುಕ್ರವಾರ, ಜುಲೈ 30, 2021
28 °C

ದೇಶದಲ್ಲಿ ಸೋಂಕಿನಿಂದ ಗುಣಮುಖಗೊಂಡವರ ಪ್ರಮಾಣ ಶೇ.51ಕ್ಕೆ: ಸಾರ್ವಕಾಲಿಕ ದಾಖಲೆ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ದೇಶದಲ್ಲಿ ಕೋವಿಡ್‌ ರೋಗದಿಂದ ಗುಣಮುಖರಾದವರ ಪ್ರಮಾಣ ಇದೇ ಮೊದಲಬಾರಿಗೆ ಶೇ.51ಕ್ಕಿಂತಲೂ ಹೆಚ್ಚಾಗಿದೆ. ಇದು ಸಾರ್ವಕಾಲಿಕ ದಾಖಲೆಯೂ ಹೌದು. 

ಕೇಂದ್ರದ ಆರೋಗ್ಯ ಇಲಾಖೆಯ ವೆಬ್‌ಸೈಟ್‌ನ ಅಂಕಿ ಅಂಶಗಳ ಪ್ರಕಾರ ಸದ್ಯ ಭಾರತದಲ್ಲಿ 3,32,424 ಮಂದಿ ಸೋಂಕಿತರಿದ್ದಾರೆ. ಈ ಪೈಕಿ 1,69,797 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇನ್ನು 1,53,106 ಮಂದಿ ಸೋಂಕಿನಿಂದಾಗಿ ಇನ್ನೂ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 
 


ಭಾರತದಲ್ಲಿ ಕೊರೊನಾ ವೈರಸ್‌– ಅಂಕಿ ಸಂಖ್ಯೆಗಳಲ್ಲಿ 

ಈ ಅಂಕಿ ಅಂಶಗಳ ಪ್ರಕಾರ ದೇಶದಲ್ಲಿ ಕೊರೊನಾ ವೈರಸ್‌ನಿಂದ ಗುಣಮುಖರಾಗುತ್ತಿರುವವರ ಪ್ರಮಾಣ ಏರುಗತಿಯಲ್ಲಿದ್ದು, ಅದು ಶೇ. 51ಕ್ಕಿಂತಲೂ ಅಧಿಕವಿದೆ. ಇದು ಆಶಾದಾಯಕ ಬೆಳವಣಿಗೆ. 

ಇನ್ನು ದೇಶದಲ್ಲಿ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 9,520ಕ್ಕೆ ಏರಿಕೆಯಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು