ಗುರುವಾರ , ಏಪ್ರಿಲ್ 2, 2020
19 °C
6ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಶ್ನೆ

ಕರ್ಫ್ಯೂ ನಡುವೆಯೂ ‘ಸೂಪರ್‌ 30’ ಕ್ಲಾಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪಟ್ನಾ (ಪಿಟಿಐ): ಕೊರೊನಾ ವೈರಸ್ ಸೋಂಕು ಹರಡದಂತೆ ಭಾನುವಾರ ‘ಜನತಾ ಕರ್ಫ್ಯೂ’ ಆಚರಣೆಯಿಂದ ಮನೆಗಳಲ್ಲಿದ್ದ ವಿದ್ಯಾರ್ಥಿಗಳಿಗೆ ‘ಸೂಪರ್‌ 30’ ಸ್ಥಾಪಕ ಆನಂದ್‌ ಕುಮಾರ್ ಗಣಿತ ಪ್ರಶ್ನೆಗಳಿಗೆ ಉತ್ತರ ಕಂಡುಹಿಡಿಯುವಂತೆ ಸೂಚಿಸಿ, ಕರ್ಫ್ಯೂ ನಡುವೆಯೂ ವಿದ್ಯಾರ್ಥಿಗಳನ್ನು ಓದಿನಲ್ಲಿ ಸಕ್ರಿಯರಾಗಿರುವಂತೆ ಮಾಡಿದ್ದಾರೆ.

6ರಿಂದ 12 ತರಗತಿ ವಿದ್ಯಾರ್ಥಿಗಳಿಗೆ ಟ್ವಿಟರ್ ಹಾಗೂ ಫೇಸ್‌ಬುಕ್ ಪುಟಗಳಲ್ಲಿ ಪ್ರಶ್ನೆ ಹಾಕಿ, ಅವುಗಳನ್ನು ಪರಿಹರಿ
ಸುವಂತೆ  ಅವರು ಭಾನುವಾರ ಸೂಚಿಸಿದ್ದರು. 

‘ಪ್ರಶ್ನೆ ಕೇಳಿದ ಗಂಟೆಯಲ್ಲೇ ನೂರಾರು ವಿದ್ಯಾರ್ಥಿಗಳು ಉತ್ತರಿಸಿದ್ದಾರೆ. ಹಲವರು ವಿವಿಧ ರೂಪಗಳಲ್ಲಿ ಪರಿಹಾರ ಸೂಚಿಸಿದ್ದಾರೆ. ಕಠಿಣವಾದ ಪ್ರಶ್ನೆಗಳಿಗೆ ಸುಲಭವಾಗಿ ಉತ್ತರ ಕಂಡುಹಿಡಿಯಲು ಕೆಲವು ಸಲಹೆಗಳನ್ನೂ ನೀಡಿದ್ದೆ. ಪ್ರಶ್ನೆಗಳು ವಿದ್ಯಾರ್ಥಿಗಳಿಗೆ ಇಷ್ಟವಾಗಿವೆ. ಇಂತಹ ಪ್ರಶ್ನೆಗಳನ್ನು ಇನ್ನಷ್ಟು ನೀಡುವಂತೆಯೂ ಅವರು  ಕೇಳಿಕೊಂಡರು’ ಎಂದು ಕುಮಾರ್ ತಿಳಿಸಿದ್ದಾರೆ.

‘ಸದಾ ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿರಬೇಕೆಂಬ ಬಯಕೆ. ಇಂಥ ಸಮಯವನ್ನು ಅವರು ಸದುಪಯೋಗ ಪಡಿಸಿಕೊಳ್ಳಬೇಕು ಎಂಬುದು ನನ್ನ ಉದ್ದೇಶ’ ಎಂದು ಅವರು ಹೇಳಿದ್ದಾರೆ. 

ದೇಶದ ಹಲವು ಭಾಗಗಳಲ್ಲಿ ಶಾಲಾ–ಕಾಲೇಜುಗಳು ಬಂದ್ ಆಗಿವೆ. ಹೀಗಾಗಿ ಮುಂದಿನ ದಿನಗಳಲ್ಲಿ ಗಣಿತಕ್ಕೆ ಸಂಬಂಧಿಸಿದ ಪ್ರಶ್ನೆಗಳ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವುದಾಗಿಯೂ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು